ರಾಯಚೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಪಕ್ಷದ ಧ್ವಜ ಹಾರಾಡಿಸಿ ಸಂಭ್ರಮಾಚರಣೆ ನಡೆಸಿದರು.

ಕಾಂಗ್ರೆಸ್ ಮುಖಂಡ ರವಿ ಬೋಸುರಾಜು, ಕಾಂಗ್ರೆಸ್ ನಗರ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಮಾಜಿ ಮಹಾನಗರ ಸದಸ್ಯ ಬಿ. ರಮೇಶ, ಎಂ. ಜಾವಿದ್, ಮಹಮ್ಮದ್ ಹುಸೇನ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮಸ್ಕಿ: ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ವಿಜಯೋತ್ಸವ ಆಚರಿಸಿದರು.

ಹಳೆಯ ಬಸ್ ನಿಲ್ದಾಣದ ಬಳಿ ಶಾಸಕ ಆರ್.ಬಸನಗೌಡ ತುರುವಿಹಾಳ ನೇತೃತ್ವ ದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಮತದಾರರು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಮನ್ನಣೆ ನೀಡಿದ್ದಾರೆ. 2028 ಸಾರ್ವತ್ರಿಕ ಚುನಾವಣೆಯಲ್ಲಿ ಸಹ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

ಪಕ್ಷದ ಮುಖಂಡರು, ಕಾರ್ಯ ಕರ್ತರು, ಪುರಸಭೆ ಸದಸ್ಯರು ಇದ್ದರು.

ರಾಯಚೂರು: ಪಶ್ಚಿಮ ಬಂಗಾಳ ಮತ್ತು ಆಸ್ಸಾಂಗಳಲ್ಲಿ ಬಿಜೆಪಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ದೈವದಕಟ್ಟೆ ಹತ್ತಿರ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಬರುವ ರಾಜ್ಯದ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅನ್ನು ಮತದಾರರು ಮನೆಗೆ ಕಳಿಸಲಿದ್ದಾರೆ. ಇಲ್ಲಿಯೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು. ಮಂಡಲ ಅಧ್ಯಕ್ಷರು, ಮುಖಂಡರು, ಪದಾದಿಕಾರಿಗಳು, ಪುರಸಭೆ ಸದಸ್ಯರು ಹಾಜರಿದ್ದರು.

ಮಸ್ಕಿ: ಪಶ್ಚಿಮ ಬಂಗಾಳ ಮತ್ತು ಆಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದರಿಂದ ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ ದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸ ಆಚರಿಸಿ ಸಿಹಿ ಹಂಚಿದರು.

ಮಾಜಿ ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ, ಹಿರಿಯ ಮುಖಂಡ, ರಾಜಕುಮಾರ, ಜಿಲ್ಲಾ ಉಪಾಧ್ಯಕ್ಷ ಗೋವಿಂದ, ಶಂಕರ ರೆಡ್ಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ರವೀಂದ್ರ ಜಾಲ್ದಾರ್, ನಗರ ಅಧ್ಯಕ್ಷ ಊಟಕೂರು ರಾಘವೇಂದ್ರ, ಪ್ರದೀಪ ಸನಬಾಳ್, ಸುಲೋಚನಾ ಬಸವರಾಜ್,ರಾಮು ಕಡಗೋಲ್, ಚಂದ್ರಶೇಖರ, ಶಿವಕುಮಾರ, ನರಸಿಂಹ ರೆಡ್ಡಿ, ಅಸ್ವಿನಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-32-1354308561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.