ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: 700 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಒತ್ತಾಯ

Last Updated 29 ಜುಲೈ 2020, 15:51 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮಾನ್ವಿಪಟ್ಟಣದ ಅಂಬೇಡ್ಕರ್ ನಗರ (ಗೌರಮ್ಮ ಲೇಔಟ್ ) ದ ಸರ್ವೆ ನಂ . 613 , 617 , 617 / 1 / ಎ , ವಾಸಮಾಡುತ್ತಿರುವ ಸುಮಾರು 700 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಿ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ದಲಿತ‌ ಸಮರ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಪ್ರದೇಶದಲ್ಲಿ ಸುಮಾರು 25 ವರ್ಷಗಳಿಂದ ಕಡು ಬಡವರು, ಹಿಂದುಳಿದವರು, ಅಲ್ಪಸಂಖ್ಯಾತ ವಾಸಿಸುತ್ತಿದ್ದು, ಇವರಿಗೆ ಹಕ್ಕುಪತ್ರ ನೀಡಿಲ್ಲ. ಜನರಿಗೆ ಸಮರ್ಪಕ ವಸತಿ, ಶೌಚಾಲಯ, ರಸ್ತೆ, ಕುಡಿಯುವ ನೀರು, ವಿದ್ಯುತ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆಯಾಗಿದೆ. ಈ ಬಗ್ಗೆ ತಾಲ್ಲೂಕು ಕಚೇರಿ, ಪುರಸಭೆ ಹಾಗೂ ಜನ ಪ್ರತಿನಿಧಿಗಳಿಂದ ಮನವಿ ಸಲ್ಲಿಸಿದರು ಕೂಡ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಮಾನ್ವಿ ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ, ಸಂಚಾಲಕ ಕರಿಯಪ್ಪ, ಹನುಮಂತಿ, ಶಿವಬಸ್ಸಮ್ಮ, ಶರಣಮ್ಮ, ತಾಯಬೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT