ರಾಯಚೂರು: ‘ದೇವದುರ್ಗ ತಾಲ್ಲೂಕಿನ ಗಬ್ಬೂರು ಹೋಬಳಿ ವ್ಯಾಪ್ತಿಯ ಹೊನ್ನಟಗಿ ಗ್ರಾಮದಿಂದ ಗೂಗಲ್ ಸಂಪರ್ಕಿಸುವ 3.5 ಕಿ.ಮೀ ರಸ್ತೆ ಕಾಮಗಾರಿ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಬೇಗ ಪೂರ್ಣಗೊಳಿಸಬೇಕು’ ಎಂದು ಎಂ.ಆರ್.ಎಚ್.ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ ಹೊನ್ನಟಗಿ ಆಗ್ರಹಿಸಿದರು.

‘2025ರ ಅಕ್ಟೋಬರ್ 9ರಂದು ಶಾಸಕಿ ಕರೆಮ್ಮ ಜಿ.ನಾಯಕ ಅವರು ಸರ್ಕಾರದ ₹5.55 ಕೋಟಿ ಅನುದಾ ನದಲ್ಲಿ ರಸ್ತೆ ಸುಧಾರಣೆ ಹಾಗೂ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಕಾಮಗಾರಿ ಆರಂಭಗೊಂಡು ಒಂದು ವರ್ಷ ಕಳೆದರೂ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ’ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.

‘ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣ, ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಟ್ಟಿದ್ದು, ರಸ್ತೆ ತುಂಬಾ ತಗ್ಗು-ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಜೀವ ಭಯದ ನಡುವೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ಶಾಲಾ ಮಕ್ಕಳು, ಗರ್ಭಿಣಿಯರು, ರೋಗಿಗಳು ಹಾಗೂ ಕೂಲಿ ಕಾರ್ಮಿಕರು ಇದೇ ರಸ್ತೆ ಅವಲಂಬಿಸಿದ್ದು, ರಸ್ತೆಯಲ್ಲಿರುವ ಜಲ್ಲಿಗಳಿಂದ ಅಪಘಾತ ಭೀತಿ ಹೆಚ್ಚಾಗಿದೆ. ಕಾಮಗಾರಿ ನಿರ್ವಹಿಸುತ್ತಿರುವ ಗುತ್ತೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲಾಧಿಕಾರಿ ತಕ್ಷಣ ರಸ್ತೆ ಡಾಂಬ ರೀಕರಣ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕು ಹಾಗೂ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದರು. ರಾಚಣ್ಣ ನಾಯಕ ಕೋಳೂರು, ಮೂರ್ತಿ ನಾಯಕ ಹೇಮನಾಳ, ಜಾಕೋಬ್ ಬೊಮ್ಮನಾಳ, ಈಶಪ್ಪ ಮದರಕಲ್, ಬಸ್ಸಪ್ಪ ಬಸವಂತಪುರ, ಹುಲಿಗಪ್ಪ ಹೊನ್ನಟಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-1115696005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.