ರಾಯಚೂರು: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಭಾನು ವಾರ ಭೂಮಿ ಪೂಜೆ ನೆರವೇರಿಸಿದರು.

ನಗರದ ನ್ಯೂ ಎಜುಕೇಶನ್ ಸೊಸೈಟಿ ಯ ಹೊಸ ಉರ್ದು ಮದರಸದ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ನಂತರ ನಗರದ ಲಿಂಗಸುಗೂರು ರಸ್ತೆಯ ಜಾಮಿಯಾ ರಜಾ ಎ ಮುಸ್ತಫ ಗುಲಶನೆ ರುಜ್ವಿ ಮದರಸದ ನೂತನ ಕೊಠಡಿಗಳಿಗೆ ₹50 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಮದರಸ ಎ ಅರಬ್ಬಿಯಾ–ಸಿರಾಜುಲ ಉಲುಮಾ ಮದರಸದ ನೂತನ ಕೊಠಡಿಗಳ ನಿರ್ಮಾಣದ ₹50 ಲಕ್ಷ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ,‘ಕಟ್ಟಡ ಸಂಪೂರ್ಣವಾಗಿ ಗುಣಮಟ್ಟದಿಂದ ಕೂಡಿರಬೇಕು. ಆದಷ್ಟು ಬೇಗ ಕೆಲಸ ಪ್ರಾರಂಭಿಸಿ, ಮಕ್ಕಳಿಗೆ ಅನುಕೂ ಲವಾಗುವ ರೀತಿಯಲ್ಲಿ ಕೆಲಸ ಮುಗಿ ಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮದರಸದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಮೂರು ತರಗತಿ, ಎರಡು ವಸತಿ ನಿಲಯದ ಕಟ್ಟಡ, ಡಿಮೆಟ್ರಿ ಸ್ನಾನಗೃಹ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಮುಂದಾಗಿದ್ದು, ಗುತ್ತೇ ದಾರರು ಉತ್ತಮವಾದ ರೀತಿಯಲ್ಲಿ ಕಟ್ಟಡ ನಿರ್ಮಿಸಬೇಕು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಮಹ್ಮದ್ ಶಾಲಂ, ಶಿವಮೂರ್ತಿ, ರುದ್ರಪ್ಪ ಅಂಗಡಿ, ಯೂಸುಫ್ಖಾನ್, ಅಲ್ಲಿ ಸಲ್ಲಾವುದ್ದೀನ್ ಸಾಬ್, ಅಪ್ಸರ ಹುಸೇನಿ, ನರಸಿಂಹಲು ಮಾಡಿಗಿರಿ, ಅಮರೇಗೌಡ ಹಂಚಿನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-820111076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.