ರಾಯಚೂರು: ಜಿಲ್ಲೆಯಲ್ಲಿ ಈಗಾಗಲೇ ನಡೆದಿರುವ ಕಾಮಗಾರಿಗಳ ವೇಗ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೂ ಮರುಜೀವ ನೀಡಬೇಕು ಎಂದು ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘ ಒತ್ತಾಯಿಸಿದೆ.

ಸಂಘದ ಅಧ್ಯಕ್ಷ ಎಸ್.ಕಮಲ್ಕುಮಾರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಪೂವಿತಾ ಎಸ್.ಅವರನ್ನು ಭೇಟಿ ಮಾಡಿ, ಮನವಿಪತ್ರ ಸಲ್ಲಿಸಿತು.

ವರ್ತುಲ ರಸ್ತೆ, ಶಕ್ತಿನಗರ ಸಮೀಪದ ಕೃಷ್ಣಾ ಸೇತುವೆ, ಷಟ್ಪಥ ರಸ್ತೆ, ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಗಳ ವೇಗ ಹೆಚ್ಚಿಸಬೇಕು. ಗ್ರೀನ್ಫಿಲ್ಡ್ ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗೊಳಿಸಬೇಕು. ಮೆಗಾ ಲಾಜಿಸ್ಟಿಕ್ಸ್ ಪಾರ್ಕ್ ಸ್ಥಾಪನೆ ಮಾಡಬೇಕು. ರೈಲ್ವೆ ಸರಕುಗಳ ಶೆಡ್ ಸ್ಥಳಾಂತರ ಮಾಡಬೇಕು. ಕೈಗಾರಿಗಳಿಗೆ ಭೂ ಸ್ವಾಧೀನ, ಗದ್ವಾಲ್ ಮತ್ತು ಮಂಚಲಾಪುರದಲ್ಲಿ ಕೈಗಾರಿಕಾ ಸೌಲಭ್ಯಗಳ ಉನ್ನತೀಕರಣ ಮಾಡಬೇಕು ಎಂದು ಮನವಿ ಮಾಡಿದರು.

ಇ-ಖಾತಾ, ವ್ಯಾಪಾರ ಪರವಾನಗಿ, ಕಟ್ಟಡ ಅನುಮತಿ ಕೊಡಬೇಕು. ಮರ್ಚೆಡ್ ಮತ್ತು ಮಂಚಲಾಪುರ ಕೆರೆ ಪ್ರದೇಶದಲ್ಲಿ ಪಕ್ಷಿಧಾಮ ಸ್ಥಾಪನೆ ಮಾಡಬೇಕು. ಜಿಲ್ಲಾ ಕೇಂದ್ರದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಬೇಕು. ರಾಯಚೂರಿನಲ್ಲಿ ಮೆಗಾ ಜವಳಿ ಪಾರ್ಕ್ ನಿರ್ಮಾಣ ಮಾಡಬೇಕು. ಸಿಂಧನೂರಿನಿಂದ ರಾಯಚೂರು ರೈಲು ಮಾರ್ಗ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಅದಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಜಂಬಣ್ಣ.ವೈ, ಮಾಜಿ ಅಧ್ಯಕ್ಷ ಮೈಲಾಪುರ ಎನ್.ಮೂರ್ತಿ, ಹಿರಿಯ ಉಪಾಧ್ಯಕ್ಷೆ ಸಾವಿತ್ರಿ ಪುರುಷೋತ್ತಮ, ಕಾರ್ಯಕಾರಿ ಸಮಿತಿ ಸದಸ್ಯ ಅಂಬಟ್ಟಿ ವೆಂಕಟರಾಜ್ ಗುಪ್ತ, ಮುರಾರಿಲಾಲ್ ಅಗರ್ವಾಲ್, ವಸಂತರಾವ್ ಪತಂಗೆ ಹಾಗೂ ಆರ್.ನಾರಾಯಣ ರಾವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-47626064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.