ರಾಯಚೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿ.ಎಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ–ಬೆಟಗೇರಿ 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಸೆಲಂ ತಮಿಳುನಾಡು 12, ಎಸ್.ಪಿ.ಕೆ.ಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ ನೆಲ್ಲೂರು ಆಂಧ್ರಪ್ರದೇಶ ಮೂವರು ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಕಣ್ಣೂರು ಕೇರಳ–22 ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಒಂದು ವಿಷಯವಾಗಿ ಓದಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜೂನ್ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು.

ಆಸಕ್ತರು https://khtigadag.ac.in/Admissionform.pdf ವೆಬ್ಸೈಟ್ನಲ್ಲಿ ಅರ್ಜಿ ಡೌನಲೋಡ್ ಮಾಡಿಕೊಂಡು, ಭರ್ತಿ ಮಾಡಿ ಮೇ 30ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪುರ ಗದಗ-ಬೆಟಗೇರಿ ಅವರಿಗೆ ಸಲ್ಲಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-32-1397021298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.