ಅಧಿಕಾರಿಗಳು ತಂಡ ರಚಿಸಿಕೊಂಡು ಗ್ರಾಮಾಂತರ ಪ್ರದೇಶದಲ್ಲಿ ಪರಿಶೀಲನೆ ನಡೆಸಬೇಕು. ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಿದ್ದರೆ ಮಾತ್ರ ಹಸ್ತಾಂತರ ಪ್ರಕ್ರಿಯಿಕೆ ಮುಂದುವರಿಸಬೇಕು
- ಬಸನಗೌಡ ದದ್ದಲ್, ರಾಯಚೂರು ಗ್ರಾಮೀಣ ಶಾಸಕ
ರಾಯಚೂರು ಮಹಾನಗರ ವಿಸ್ತಾರವಾಗುತ್ತಿದ್ದು ರೈಲು ನಿಲ್ದಾಣ ಮೇಲ್ದರ್ಜೆಗೇರಿಸಬೇಕಿದೆ. ಸಂಚಾರ ಒತ್ತಡ ಕಡಿಮೆ ಮಾಡುವ ದಿಸೆಯಲ್ಲಿ ರಿಂಗ್ ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆ. ಇದಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಜಿಲ್ಲಾಡಳಿತ ವರದಿ ಕೊಡಬೇಕು
- ಜಿ. ಕುಮಾರ ನಾಯಕ, ಸಂಸದ
ದೇವದುರ್ಗ ತಾಲ್ಲೂಕಿನಲ್ಲಿ ಜಲಧಾರೆ ಹಾಗೂ ಜಲ ಜೀವನ್ ಮಿಷನ್ ಯೋಜನೆಗಳು ಸಂಪೂರ್ಣ ವಿಫಲವಾಗಿದೆ. ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುವುದು ತಪ್ಪಿಲ್ಲ. ಈ ದಿಸೆಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು