ಭಾನುವಾರ, ಮೇ 29, 2022
22 °C
ನ್ಯಾ.ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸಲು ಒತ್ತಾಯ

ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲಾ ನ್ಯಾಯಾಲಯ ಆವರಣದ ಬಳಿ ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಜಿಲ್ಲಾ ಪ್ರಧಾನ ಹಾಘೂ ಸತ್ರ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದ ನೇತೃತ್ವದಲ್ಲಿ ವಕೀಲರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಗಣರಾಜ್ಯೋತ್ಸವ ಆಚರಣೆಯ ವೇಳೆ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಾಗ ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ ಎಂದು ಧ್ವಜ ಸ್ತಂಭದಲ್ಲಿ ಇಟ್ಟ ಫೋಟೋ ತೆಗೆದಿರಿಸಿ ಆನಂತರ ಧ್ವಜಾರೋಹಣ ಮಾಡಿದ ಘಟನೆ ಖಂಡನೀಯ.

ಜಿಲ್ಲಾ ನ್ಯಾಯಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು. ಉಚ್ಛ ನ್ಯಾಯಾಲಯದ ಅಧೀನ ನ್ಯಾಯಾಲಯದಲ್ಲಿ ಬರುವ ಎಲ್ಲಾ ನ್ಯಾಯಾಲಯಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಜೆ.ಬಸವರಾಜ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಯಕ, ಎಸ್. ಮಾರೆಪ್ಪ, ಕರುಣಾಕರ ಕಟ್ಟಿಮನಿ, ಲಕ್ಷ್ಮಣ, ಶಿವಕುಮಾರ ಮ್ಯಾಗಳಮನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.