ರಾಯಚೂರು: ‘ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಯೋಜನೆ, ಸೌಲಭ್ಯಗಳು ದೊರೆಯಬೇಕು. ಅಲ್ಲದೆ ಕಂದಾಯ ನ್ಯಾಯಾಲಯಗಳಲ್ಲಿಯ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಪೂವಿತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

‘ಜಿಲ್ಲೆಯ ಆಡಳಿತಾತ್ಮಕ ಸುಧಾರಣೆ, ಭೂ ದಾಖಲೆಗಳ ನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪೋಡಿ, ದುರಸ್ತಿ, ಪಹಣಿ ತಿದ್ದುಪಡಿ ಮತ್ತು ಭೂ ಒತ್ತುವರಿ ತೆರವು ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಪಿಂಚಣಿ ಯೋಜನೆಗಳು, ಆರ್ಟಿಸಿ ವಿತರಣೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಕಾಲಮಿತಿಯೊಳಗೆ ಜನರಿಗೆ ತಲುಪಿಸಬೇಕು. ಸರ್ಕಾರದ ಬಾಕಿ ಬಿದ್ದಿರುವ ಕಂದಾಯ, ಮತ್ತು ಮರಳು ಗಣಿಗಾರಿಕೆಯ ಮೇಲಿನ ದಂಡಗಳನ್ನು ಸಮರ್ಪಕವಾಗಿ ವಸೂಲಿ ಮಾಡಬೇಕು. ಅಲ್ಲದೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಪರಿಹಾರ ಕ್ರಮಗಳ ಕುರಿತು ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಕೆಳಮಟ್ಟದ ಕಂದಾಯ ಕಚೇರಿಗಳಾದ ನಾಡ ಕಚೇರಿಗಳು ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕ ಆಡಳಿತ ನೀಡಬೇಕು. ಹಾಗೂ ಸಾರ್ವಜನಿಕರಿಂದ ಸ್ವೀಕರಿಸಲ್ಪಟ್ಟ ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಗಡುವಿನೊಳಗೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ಉಪವಿಭಾಗಾಧಿಕಾರಿ ಡಾ.ಹಂಪಣ್ಣ ಸಜ್ಜನ್, ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಲಿಂಗಸುಗೂರು ತಹಶೀಲ್ದಾರ್ ಸತ್ಯಮ್ಮ, ದೇವದುರ್ಗ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಸಿಂಧನೂರು ತಹಶೀಲ್ದಾರ್ ಅರುಣಕುಮಾರ ದೇಸಾಯಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-709702232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.