ಬುಧವಾರ, ಜೂನ್ 16, 2021
28 °C

ರಾಯಚೂರು: ಜಿಲ್ಲೆಗೆ ಆಮ್ಲಜನಕ ಹಂಚಿಕೆಗಾಗಿ ಡಿಸಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು 28 ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಕೋವಿಡ್‌ ಸೋಂಕಿತರಿಗೆ 10.38 ಟನ್‌ ಆಮ್ಲಜನಕ ಹಂಚಿಕೆ ಮಾಡಲಾಗಿದೆ. ಆದರೆ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಗೆ ಹೆಚ್ಚು ಆಮ್ಲಜನಕ ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕೋರಿದ್ದಾರೆ.

ಜಿಲ್ಲೆಯಲ್ಲಿ ಮೂರು ಆಮ್ಲಜನಕ ರಿಫಿಲ್ಲಿಂಗ್‌ ಘಟಕಗಳಿದ್ದು, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳು ಇವುಗಳ ಮೇಲೆ ಅವಲಂಬಿತವಾಗಿವೆ. ರಾಯಚೂರು ಜಿಲ್ಲೆಯ 50 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 300 ಹಾಸಿಗೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಗೆ ಒಟ್ಟು 20 ರಿಂದ 25 ಮೆಟ್ರಿಕ್‌ ಟನ್‌ ಆಮ್ಲಜನಕ ಅಗತ್ಯವಿದೆ. ಕನಿಷ್ಠ ಈಗಿರುವ ಆಮ್ಲಜನಕ ಹಂಚಿಕೆ ಪ್ರಮಾಣವನ್ನು 15 ಮೆಟ್ರಿಕ್‌ ಟನ್‌ಗೆ ಹೆಚ್ಚಿಸಬೇಕು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು