ರಾಯಚೂರು: ‘ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡ ಜ್ಯೋತಿ ರಥಯಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಪಾಲಿಕೆಯ ಕೋರ್ಟ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

‘ರಾಯಚೂರು ಜಿಲ್ಲಾ ಉತ್ಸವ ಫೆ.5ರಿಂದ 7ರವರೆಗೆ ನಡೆಯಲಿದೆ. ಉತ್ಸವದಲ್ಲಿ ಕನ್ನಡ ನಾಡು–ನುಡಿಯ ಬಗ್ಗೆ ಜನತೆಗೆ ಜಾಗೃತಿ ಮೂಡಿಸಲು ಫೆ.1ರಂದು ಹಮ್ಮಿಕೊಂಡ ಜ್ಯೋತಿ ರಥಯಾತ್ರೆಯು ರಾಯಚೂರು ನಗರದಿಂದ ಹೊರಟು ಜಿಲ್ಲೆಯಾದ್ಯಂತ ಸಂಚರಿಸಲಿದೆ’ ಎಂದು ತಿಳಿಸಿದರು.

‘ಈ ಜ್ಯೋತಿ ರಥಯಾತ್ರೆಯ ಚಾಲನಾ ಕಾರ್ಯಕ್ರಮ ಫೆ.1ರಂದು ಬೆಳಿಗ್ಗೆ 10.30ಕ್ಕೆ ರಾಯಚೂರು ನಗರದ ಹೃದಯ ಭಾಗದಲ್ಲಿನ ಐತಿಹಾಸಿಕ ಕರ್ನಾಟಕ ಸಂಘದ ಆವರಣದಿಂದ ಹೊರಡುವುದು. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಮ್ಮೆಲ್ಲರ ನೆಚ್ಚಿನ ಐತಿಹಾಸಿಕ ಕರ್ನಾಟಕ ಸಂಘದ ಆವರಣವನ್ನು ಹಬ್ಬದ ರೀತಿಯಲ್ಲಿ ಸಿದ್ಧಪಡಿಸಿ ಅಲಂಕಾರಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಒಂದೇ ಬಗೆಯ ಸೀರೆಯೊಂದಿಗೆ, ಶಿಸ್ತುಬದ್ಧವಾಗಿ ಜ್ಯೋತಿ ರಥಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಏರ್ಪಾಡು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ರಾಯಚೂರು ಜಿಲ್ಲೆಯ ಎಲ್ಲಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲೆಯ ಎಲ್ಲಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಆರಕ್ಷಕ ಉಪ ನಿರೀಕ್ಷಕರು, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಸಮಿತಿಯ ಸದಸ್ಯರಾಗಿದ್ದು, ಈ ಬಗ್ಗೆ ಗಮನ ಹರಿಸಿ ಜ್ಯೋತಿ ರಥಯಾತ್ರೆಯು ಎಲ್ಲಾ ಕಡೆಗಳಲ್ಲಿ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.

ಜ್ಯೋತಿ ರಥಯಾತ್ರೆ ಸಮಿತಿಯ ಅಧ್ಯಕ್ಷ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧೂ, ಡಿವೈಎಸ್ಪಿ ಶಾಂತವೀರ, ಸಮಿತಿಯ ಸದಸ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.