ರಾಯಚೂರು: ನಗರದಲ್ಲಿ ಗುರುವಾರದಿಂದ ಆರಂಭವಾಗಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಲಕ್ಷಾಂತರ ಜನ ಬರುವ ನಿರೀಕ್ಷೆ ಇರುವ ಕಾರಣ ಉತ್ಸವದ ಸಂದರ್ಭದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುವಂತೆ ಸಕಲ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದರು.

ಬಂದೋಬಸ್ತ್ಗೆ ಮೂವರು ಡಿವೈಎಸ್ಪಿ, 8 ಜನ ಇನ್ಸ್ಪೆಕ್ಟರ್, 16 ಸಬ್ ಇನ್ಸ್ಪೆಕ್ಟರ್, 500 ಪೊಲೀಸ್ ಕಾನ್ಸ್ಟೆಬಲ್ ಹಾಗೂ ಗೃಹರಕ್ಷಕ ಸಿಬ್ಬಂದಿ, ತಲಾ 3 ಕೆಎಸ್ಆರ್ಪಿ ಪಡೆ, ಡಿಎಆರ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳ, ಆಹಾರ ಮೇಳ, ಮತ್ಸ್ಯ ಮೇಳ ಹಾಗೂ ಸಂಜೆ ಸಂಗೀತ ಕಾರ್ಯಕ್ರಮ ಆಯೋಜಿಸಿರುವ ಕಾರಣ ಹೆಚ್ಚು ಜನ ಸೇರಲಿದ್ದಾರೆ. ರಂಗ ಮಂದಿರದಲ್ಲಿ ನಾಟಕ, ಮಹಿಳಾ ಸಮಾಜದಲ್ಲಿ ಕವಿಗೋಷ್ಠಿಗಳು ನಡೆಯಲಿವೆ. ಹೀಗಾಗಿ ಇಲ್ಲಿಯೂ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆಯಾ ಮಾರ್ಗದಲ್ಲಿ ಪಾರ್ಕಿಂಗ್ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಕನಿಷ್ಠ 3 ಸಾವಿರ ಕಾರು, ಜೀಪ್ಗಳು ಹಾಗೂ 4 ಸಾವಿರ ದ್ವಿಚಕ್ರ ವಾಹನಗಳು ಬರುವ ನಿರೀಕ್ಷೆ ಇದೆ. ಸಾರ್ವಜನಿಕರು ಪಾರ್ಕಿಂಗ್ಗೆ ಗೊತ್ತುಪಡಿಸಿದ ಸ್ಥಳದಲ್ಲೇ ಪಾರ್ಕಿಂಗ್ ಮಾಡಬೇಕು ಎಂದು ಮನವಿ ಮಾಡಿದರು.

ಭದ್ರತೆ ದೃಷ್ಟಿಯಿಂದ ಮಹಾನಗರ ಪಾಲಿಕೆಯಿಂದ 150 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಲಾಗಿದೆ. ಇದರ ಜೊತೆಗೆ ಡ್ರೋನ್ ಕ್ಯಾಮೆರಾಗಳು ಕಾರ್ಯನಿರ್ವಹಿಸಲಿವೆ. ಜನ ಹೆಚ್ಚು ಸೇರುವ ಸ್ಥಳದಲ್ಲಿ ಮಕ್ಕಳು ಕಾಣೆಯಾದಲ್ಲಿ ತಕ್ಷಣಕ್ಕೆ ಮಾಹಿತಿ ಕೊಡಲು ಅಲ್ಲಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಡಿವೈಎಸ್ಪಿ ಶಾಂತವೀರಯ್ಯ ಮಾತನಾಡಿ,‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣಕ್ಕೆ ಬರುವ ಸಾರ್ವಜನಿಕರ ವಾಹನಗಳಿಗೆ ಲಕ್ಷ್ಮಿ ನಾರಾಯಣ ಫ್ಲೋರ್ಮಿಲ್ ಸಮೀಪದ 7 ಎಕರೆ ವಿಶಾಲ ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಸಿಂಧನೂರು, ಲಿಂಗಸುಗೂರು ಕಡೆಯಿಂದ ಬರುವ ವಾಹನಗಳಿಗೆ ಗ್ರೀನ್ ಪ್ಯಾಲೇಸ್, ಪೆಟ್ರೋಲ್ ಬಂಕ್ ಹಾಗೂ ವಿವಿಧ ಖಾಲಿ ಜಾಗಗಳಲ್ಲಿ ಸುಮಾರು 2 ಸಾವಿರ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ವಿಐಪಿ, ಮಾಧ್ಯಮ ಹಾಗೂ ಅಧಿಕಾರಿಗಳ ವಾಹನಗಳಿಗೆ ಕೃಷಿ ವಿಶ್ವವಿದ್ಯಾಲಯದ ಗೆಸ್ಟ್ ಹೌಸ್ ರಸ್ತೆಯ ಸಮೀಪ ಪಾರ್ಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಕಲಾವಿದರ ವಾಹನಗಳಿಗೆ ಮುಖ್ಯ ವೇದಿಕೆಯ ಹಿಂಭಾಗದಲ್ಲಿ 50-60 ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಗಾಂಧಿ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ರೈಡ್ಗೆ ಬರುವವರ ವಾಹನಗಳಿಗೆ ಕ್ರೀಡಾಂಗಣದ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಮಂತ್ರಾಲಯ ರಸ್ತೆ ಕಡೆಯಿಂದ ನಗರ ಪ್ರವೇಶಿಸುವ ಹಾಗೂ ಯರಮರಸ್ ಕಡೆಯಿಂದ ನಗರಕ್ಕೆ ಬರುವ ವಾಹನಗಳ ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ. ಅಲ್ಲಲ್ಲಿ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.