ರಾಯಚೂರು: ‘ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಕೊರತೆಯಿಲ್ಲ. ಹಾಗಾಗಿ ಸಾರ್ವಜನಿಕರು ಅಂತಕಪಡುವ ಅಗತ್ಯ ಇಲ್ಲ’ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಏರ್ಪಡಿ ಸಲಾಗಿದ್ದ ಜಿಲ್ಲೆಯ ಅಧಿಕಾರಿಗಳು, ತೈಲ ಕಂಪನಿ ಮಾರಾಟ ಪ್ರತಿನಿಧಿಗಳು ಹಾಗೂ ಪೆಟ್ರೋಲ್, ಡೀಸೆಲ್ ಬಂಕ್ಗಳ ಪ್ರತಿನಿಧಿಗಳೊಂದಿಗಿನ ವಿಡಿಯೊ ಸಂವಾದ ಸಭೆಯಲ್ಲಿ ಮಾತನಾಡಿದರು.

‘ತೈಲ ಕಂಪನಿ ವಿತರಕರು ಸಮರ್ಪಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಸಬೇಕು. ಎಲ್ಲ ಬಂಕ್ ಮಾಲೀಕರು ದೈನಂದಿನ ಮಾಹಿತಿ ಒದಗಿಸಬೇಕು. ಸಾರ್ವಜನಿಕರ ಬೇಡಿಕೆಗೆ ಅನುಸಾರ ಇಂಧನ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಮಾರಾಟಗಾರರಿಗೆ ಸೂಚಿಸಿದರು.

‘ಮುಂಗಾರು ಆರಂಭವಾಗುತ್ತಿರುವರಿಂದ ಭೂಮಿ ಉಳುಮೆ ಕಾರ್ಯ ನಡೆಯುತ್ತಿದೆ. ಹಾಗಾಗಿ ರೈತರಿಗೆ ಯಾವುದೇ ಅನಾನುಕೂಲ ಹಾಗೂ ಸಮಸ್ಯೆಯಾಗದಂತೆ ಇಂಧನ ಪೂರೈಕೆ ಮಾಡಬೇಕು. ನಿಗದಿತ ದರದಲ್ಲಿ ತೈಲ ಮಾರಾಟ ಮಾಡಬೇಕು. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಗ್ರಾಹಕರ ಹಿತರಕ್ಷಣೆ, ಇಂಧನ ಸುರಕ್ಷತೆ ಮತ್ತು ನಿಯಮಾವಳಿಗಳ ಪಾಲನೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ತೈಲ ಕಂಪನಿ ಪ್ರತಿನಿಧಿಗಳು ಮಾತನಾಡಿ,‘ಜಿಲ್ಲೆಯಲ್ಲಿ ಇಂಧನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುವುದರ ಜೊತೆಗೆ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಆಹಾರ ಇಲಾಖೆ ಉಪ ನಿರ್ದೇಶಕ ನಜೀರ್ ಅಹಮದ್ ಮಾತನಾಡಿ,‘ಜಿಲ್ಲೆಯಲ್ಲಿ ಬಿಪಿಸಿಎಲ್ 48, ಐಒಸಿಎಲ್ 84, ಎಚ್ಪಿಸಿಎಲ್ 30 ಇದ್ದು, ನಯಾರ 32 ಒಳಗೊಂಡಂತೆ ಒಟ್ಟು 194 ಪೆಟ್ರೋಲ್ ಬಂಕ್ಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಉಪವಿಭಾಗಾಧಿಕಾರಿಗಳಾದ ಹಂಪಣ್ಣ ಸಜ್ಜನ್, ಬಸವಣೆಪ್ಪ ಕಲಶೆಟ್ಟಿ, ತಹಶಿಲ್ದಾರ್ ಸುರೇಶ ವರ್ಮಾ, ಆಹಾರ ಇಲಾಖೆ ವ್ಯವಸ್ಥಾಪಕ ಹರೀಶ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-32-557555890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.