ರಾಯಚೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಬೆಳಗಿನ ಜಾವ ಗುಡುಗು, ಸಿಡಿಲಿನ ಅಬ್ಬರದ ನಡುವೆ ಭರ್ಜರಿ ಮಳೆಯಾಯಿತು. ಕೆಲ ದಿನಗಳಿಂದ ಬಿಸಿಲಿನಿಂದ ತತ್ತರಿಸಿದ ಜನರಿಗೆ ಮಳೆ ತಂಪು ನೀಡಿತು.

ಬೆಳಗಿನ ಜಾವ ಆರಂಭವಾದ ಮಳೆ ಕೆಲವೇ ಹೊತ್ತಿನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಗೆ ವ್ಯಾಪಿಸಿತು. ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಿದ್ದರಿಂದ ಮರದ ಕೊಂಬೆಗಳು ಮುರಿದು ರಸ್ತೆಗೆ ಬಿದ್ದ ಘಟನೆಗಳೂ ನಡೆದವು. ಗ್ರಾಮೀಣ ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದರು. ಮುಂಗಾರು ಪೂರ್ವ ಮಳೆಯ ಪರಿಣಾಮ ಬಿತ್ತನೆ ಕಾರ್ಯಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ನಗರದ ಸ್ಟೇಷನ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸವಾರರಿಗೆ ಸ್ವಲ್ಪ ಸಮಸ್ಯೆಯಾದರೂ ಮಳೆಯನ್ನು ಸ್ವಾಗತಿಸಿದರು.

ಮಂಗಳವಾರ ರಾತ್ರಿ ಮೋಡ ಕವಿದ ವಾತಾವರಣ ಕಾಣಿಸದಿದ್ದರೂ, ಬುಧವಾರ ಮುಂಜಾನೆ ಏಕಾಏಕಿ ಮಳೆ ಆರಂಭವಾಗಿ ಜನರಲ್ಲಿ ಅಚ್ಚರಿ ಮೂಡಿಸಿತು.

ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿ ನಿವಾಸಿಗಳು ಸಮಸ್ಯೆ ಎದುರಿ ಸಿದರು.

ಹವಾಮಾನದಲ್ಲಿ ಏಕಾಏಕಿ ಉಂಟಾದ ಬದಲಾವಣೆಯಿಂದ ಜಿಲ್ಲೆಯಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಲಿಂಗಸುಗೂರು: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ನಾಲ್ಕು ತಾಸು ಮಳೆ ಸುರಿದ ಕಾರಣ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜನರು ಮಳೆಯಿಂದಾಗಿ ಸಂತಸಗೊಂಡಿದ್ದಾರೆ. ಗುಡುಗು, ಗಾಳಿ ಸಹಿತ ಸುರಿದ ಮಳೆಯಿಂದಾಗಿ ಬುಧವಾರ ಬೆಳಿಗ್ಗೆ ಜನರು ಮನೆಯಿಂದ ಹೊರಬರಲು ಆಗದಂತಹ ವಾತವಾರಣ ಸೃಷ್ಟಿಯಾಯಿತು.

ಗ್ರಾಮೀಣ ಭಾಗದಲ್ಲಿ ಮಳೆಗೆ ಜಮೀನುಗಳು ಕೆರೆಗಳಂತಾಗಿವೆ. ಅಧಿಕ ಮಳೆಯಿಂದಾಗಿ ತಾಲ್ಲೂಕಿನ ಜಾಗಿರನಂದಿಹಾಳ ಗ್ರಾಮದ ಬಳಿಯ ಹಳ್ಳಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದ ಕಾರಣ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕಳೆದ ಶನಿವಾರ ರಾತ್ರಿ ಸುರಿದ ಮಳೆಗೆ ಹಳ್ಳ ಭರ್ತಿಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ವಾರದಲ್ಲಿ ಇದು ಎರಡನೇ ಬಾರಿ. ಹಳ್ಳಕ್ಕೆ ಹೊಸ ಸೇತುವೆ ನಿರ್ಮಾಣ ಮಾಡಬೇಕು ಎನ್ನುವುದು ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-32-543074507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.