ಮಂಗಳವಾರ, ಆಗಸ್ಟ್ 3, 2021
27 °C

12ರ ನಂತರ ಕೃಷ್ಣಾ ನದಿಗೆ ‌ನೀರು: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಹಾರಾಷ್ಟ್ರದಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ನಾರಾಯಣಪುರ ಕೆಳಭಾಗ ಕೃಷ್ಣಾನದಿಗೆ ಜುಲೈ 12 ರ ನಂತರ ಯಾವುದೇ ಕ್ಷಣದಲ್ಲಿ ನೀರು ಹರಿಬಿಡುವ ಸಾಧ್ಯತೆ ಇದ್ದು, ನದಿಪಾತ್ರದಲ್ಲಿ ಜನರು ಜಾಗೃತಿ ವಹಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚನೆ ನೀಡಿದ್ದಾರೆ.

ನದಿ ಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗೃತಿ ವಹಿಸುವ ನಿಟ್ಟಿನಲ್ಲಿ ಕೃಷ್ಣಾನದಿ ಪಾತ್ರದ ಗ್ರಾಮಗಳಲ್ಲಿ ಡಂಗುರದ ಮೂಲಕ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣಾನದಿ ಪಾತ್ರದ ಹೋಬಳಿಗಳ ಕಂದಾಯ ನಿರೀಕ್ಷಕರಿಗೆ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು