ರಾಯಚೂರು: ‘ನಾಸು ಹರ್ಡೀಕರ್ ಅವರ ಸೇವಾ ಮನೋಭಾವ ಇಂದಿನ ಯುವಜನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ನಳಂದ ಡಿ.ಇಡಿ ಕಾಲೇಜಿನ ಪ್ರಾಚಾರ್ಯ ಚಂದ್ರಯ್ಶ ಬಾಡಿಯಾಲ ಹೇಳಿದರು.

ತಾಲ್ಲೂಕಿನ ಯರಮರಸ್ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ನಳಂದ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಾಸು ಹರ್ಡೀಕರ್ ಅವರ 137ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯುವಕರು ಶಿಕ್ಷಣದ ಜತೆ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವ ಅಳವಡಿಸಿ ಕೊಂಡಾಗ ಇಂಥ ಸ್ವತಂತ್ರ ಸೇನಾನಿಗಳ ಜಯಂತಿ ಆಚರಣೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಭಾರತ ಸೇವಾದಳದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಎಸ್.ಹಿರೇಮಠ ಮಾತನಾಡಿ, ‘ಪ್ರತಿಯೊಬ್ಬರು ರಾಷ್ಟ್ರ ಧ್ವಜ, ರಾಷ್ಟ್ರ ಲಾಂಛನ, ರಾಷ್ಟ್ರಗೀತೆ, ಸಂವಿಧಾನದ ಬಗ್ಗೆ ತಿಳಿದುಕೊಂಡು ರಾಷ್ಟ್ರದ ಏಕತೆಗಾಗಿ ಒಗ್ಗಟ್ಟಾಗಿ ದುಡಿಯಬೇಕು.ಈ ನಿಟ್ಟಿನಲ್ಲಿ ನಾಸು ಹರ್ಡೀಕರ್ ಅವರ ಜೀವನ ನಮಗೆಲ್ಲರಿಗೂ ಮಾದರಿಯಾಗಲಿ’ ಎಂದು ಹೇಳಿದರು.

ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದಪ್ಪ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಮಹನೀಯರ ಆದರ್ಶಗಳನ್ನು ಪಾಲಿಸಿಕೊಂಡು ಮುಂದಿನ ದಿನಗಳಲ್ಲಿ ನಿಸ್ವಾರ್ಥವಾಗಿ ದೇಶಸೇವೆ ಮಾಡಬೇಕು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ ಮಾತನಾಡಿದರು. ವಿದ್ಯಾಸಾಗರ ಚಿಣಮಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹರ್ಡೀಕರ್ ಅವರ ಕುರಿತು ಭಾಷಣ ಸ್ಪರ್ಧೆಯಲ್ಲಿ ಶರೀಫ ಪ್ರಥಮ, ಭಾಗ್ಯಲಕ್ಷ್ಮಿ ದ್ವಿತೀಯ, ಹೇಮಾವತಿ ತೃತೀಯ ಬಹುಮಾನ. ರಾಷ್ಟ್ರೀಯ ಭಾವೈಕ್ಯತೆ ಕುರಿತು ಭಾಷಣ ಸ್ಪರ್ಧೆಯಲ್ಲಿ ನಂದಿನಿ ಪ್ರಥಮ, ಕಾಶಿಮ್ ಪಟೇಲ್ ದ್ವಿತೀಯ, ಕಾವೇರಿ ತೃತೀಯ ಬಹುಮಾನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-1979830911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.