ರಾಯಚೂರು: ರಾಯಚೂರು ಮಹಾನಗರಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಬೃಹತ್ ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ದಿಸೆಯಲ್ಲಿ ನಗರದಲ್ಲಿ ಬುಧವಾರ ಶಾಲಾ ಮಕ್ಕಳಿಗಾಗಿ ವಿಶೇಷ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸ್ವಚ್ಛ ಭಾರತ ಮಿಷನ್ 2.0ರ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಘಟಕದಡಿ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಮಹಾನಗರ ಪಾಲಿಕೆ ವಲಯ ಆಯುಕ್ತ ಮಲ್ಲಿಕಾರ್ಜುನ ಬಿ.ಎಂ. ಮಾತನಾಡಿ, ‘ ಪ್ರಮುಖ ಜವಾಬ್ದಾರಿಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ’ ಎಂದರು.

‘ನಗರದ ವಿವಿಧ ಶಾಲೆಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪರಿಸರ ಕಾಳಜಿ, ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆ ಕುರಿತ ತಮ್ಮ ಕಲ್ಪನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಗೊಳಿಸಿದ್ದಾರೆ’ ಎಂದು ಹೇಳಿದರು.

ಮಧ್ಯಾಹ್ನ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೃಹತ್ ತ್ಯಾಜ್ಯ ಉತ್ಪಾದಕರಾದ ಹೋಟೆಲ್, ರೆಸ್ಟೋರೆಂಟ್ ಹಾಗೂ ಕೈಗಾರಿಕೆಗಳ ಮಾಲೀಕರಿಗೆ ವಿಶೇಷ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಶಿಕ್ಷಕ ಸಂತೋಷಕುಮಾರ ಮಾತನಾಡಿದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-32-1754292269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.