ರಾಯಚೂರು: ಅತಿಯಾದ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು ಹಾಗೂ ಇತರೆ ರಾಸಾಯನಿಕಗಳ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಮುಂದಿನ ಪೀಳಿಗೆಯ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪರಿಸರ ಅಧಿಕಾರಿ ಗಣಪತಿ ಹೆಗಡೆ ಹೇಳಿದರು.

ಇಲ್ಲಿನ ಐಎಂಎ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮ ಜೀವನಕ್ಕೆ ಆಧಾರವಾದ ಗಾಳಿ, ನೀರು ಮತ್ತು ಭೂಮಿಯನ್ನು ಸ್ವಚ್ಛವಾಗಿಟ್ಟುಕೊಂಡರೆ ಮಾತ್ರ ನಮ್ಮ ಆರೋಗ್ಯ ಮತ್ತು ಜೀವನವೂ ಸ್ವಚ್ಛ, ಸುರಕ್ಷಿತವಾಗಿರುತ್ತದೆ. ಪ್ರಕೃತಿಯ ಈ ಮೂರು ಮೂಲಭೂತ ಸಂಪನ್ಮೂಲಗಳಲ್ಲಿ ಯಾವುದೇ ರೀತಿಯ ಮಾಲಿನ್ಯ ಉಂಟಾದರೆ ಅದರ ಪರಿಣಾಮ ಮಾನವನ ಆರೋಗ್ಯದ ಮೇಲೆ ಬೀಳುತ್ತದೆ. ಭವಿಷ್ಯದಲ್ಲಿ ವಿವಿಧ ರೀತಿಯ ಅನಾರೋಗ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಕಡಿಮೆ ಬಳಕೆ, ಮರುಬಳಕೆ ಮತ್ತು ಮರುಸಂಸ್ಕರಣೆ ಎಂಬ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಡಿಮೆ ತ್ಯಾಜ್ಯ ಉತ್ಪಾದಿಸಬೇಕು ಹಾಗೂ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಗ್ರೀನ್ ರಾಯಚೂರು ಸಂಸ್ಥೆಯ ಮುಖ್ಯಸ್ಥೆ ಸರಸ್ವತಿ ಕಿಲಿಕಿಲಿ ಮಾತನಾಡಿದರು. ಗಿರೀಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ, ಉಪನ್ಯಾಸಕ ಮಲ್ಲನ ಗೌಡ್ರು, ಎಸ್. ಎನ್. ಜ್ಯೋತಿ, ಗುರುರಾಜ ಪನ್ನೂರು, ಅನುಪಮ, ನಾಗವೇಣಿ ಸಾರೊಡೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-1441423015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.