ರಾಯಚೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಯವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ ಒತ್ತಾಯಿಸಿದರು.

ಈಶ್ವರ ಖಂಡ್ರೆಯವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕೆಪಿಸಿಸಿ ಸೇರಿದಂತೆ ಸಚಿವರಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರ ಶ್ರದ್ಧೆ, ಅನುಭವ ಹಾಗೂ ಕ್ರಿಯಾಶೀಲತೆಯನ್ನು ಪರಿಗಣಿಸಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಆಗ್ರಹಿಸಿದರು.

ಸಿಂಧನೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಂಪನಗೌಡ ಬಾದರ್ಲಿ ಸೇವಾ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ರಚನೆಯಾಗಲಿರುವ ಹೊಸ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಪ್ರತಿನಿಧಿಗಳಿಗೆ 10 ರಿಂದ 11 ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭೀಮರೆಡ್ಡಿ ಕಲ್ಲೂರು, ಸೋಮನಾಥ ಗಣದಿನ್ನಿ, ಪರಮೇಶ್ವರಪ್ಪ ಸಾಲಿಮಠ ಹಾಗೂ ಪ್ರತಿಭಾ ಗೋನಾಳ ಸೇರಿದಂತೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1077995607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.