ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡದಲ್ಲಿ ಖಾಸಗಿ ವೈದ್ಯರಲ್ಲಿ ಚಿಕಿತ್ಸೆ ಪಡೆದು ಬಾಲಕಿ ಅಸ್ವಸ್ಥಗೊಂಡು ಸಾವಿಗೀಡಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿ 18 ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 13 ಕ್ಲಿನಿಕ್ಗಳಿಗೆ ಬೀಗ ಹಾಕಿದ್ದಾರೆ.

ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಅಯುಷ್ಯ ಇಲಾಖೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳನ್ನು ರಚನೆ ಮಾಡಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.

ದಾಳಿ ವೇಳೆ ನಕಲಿ ವೈದ್ಯರು ಬಳಸುತ್ತಿದ್ದ ಔಷಧಿಗಳು, ಉಪಕರಣಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಗ್ರಾಮಗಳಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲು ಬರುವ ವ್ಯಕ್ತಿಗಳ ಸರಿಯಾದ ಅರ್ಹತೆಯ ಬಗ್ಗೆ ತಿಳಿದುಕೊಳ್ಳಬೇಕು. ನಕಲಿ ವೈದ್ಯರಾದರೆ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಬೇಕು. ಕಟ್ಟಡಗಳನ್ನು, ಮಳಿಗೆ, ಮನೆಗಳನ್ನು ಬಾಡಿಗೆ ನೀಡುವ ಮಾಲಿಕರು ಸಹ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.