ಕವಿತಾಳ: ಜಮೀನುಗಳಿಗೆ ಹೋಗಲು ರಸ್ತೆ ನಿರ್ಮಾಣ ಮತ್ತು ಜಮೀನುಗಳಿಗೆ ಮಳೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಮೀಪದ ಹರ್ವಾಪುರ ಗ್ರಾಮದ ಬಳಿ ಬೆಳಗಾವಿ ರಾಯಚೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಜಮೀನುಗಳಿಗೆ ಸಂಪರ್ಕಿಸುವ ರಸ್ತೆಗಳಿಲ್ಲದಂತಾಗಿದೆ. ಪಾಮನಕಲ್ಲೂರು ಸೇರಿದಂತೆ ಹೋಬಳಿ ವ್ಯಾಪ್ತಿಯ ಹರ್ವಾಪುರ, ತುಪ್ಪದೂರು, ಆನಂದಗಲ್ ಗ್ರಾಮಗಳ ವ್ಯಾಪ್ತಿಯ ಅಂದಾಜು ಎರಡು ಸಾವಿರ ಎಕರೆ ಕೃಷಿ ಜಮೀನುಗಳಿಗೆ ಸಂಪರ್ಕ ರಸ್ತೆ ಇಲ್ಲದಂತಾಗಿದೆ. ಈ ಹಿಂದಿನಂತೆ ಹಳೆ ರಸ್ತೆಯಲ್ಲಿ ಓಡಾಡಲು ಅವಕಾಶ ಕಲ್ಪಿಸಬೇಕು. ಸಾಧ್ಯವಾಗದಿದ್ದರೆ ಹೊಸದಾಗಿ ರಸ್ತೆ ನಿರ್ಮಿಸಬೇಕು’ ಎಂದು ರೈತರು ಆಗ್ರಹಿಸಿದರು.

‘ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ಜಮೀನುಗಳಿಗೆ ಸಂಪರ್ಕ ರಸ್ತೆ ನಿರ್ಮಾಣ ಮಾಡಿಲ್ಲ. ಮುಂಗಾರು ಸಮೀಪಿಸುತ್ತಿದ್ದು, ಕೃಷಿ ಚಟುವಟಿಕೆ ಕೈಗೊಳ್ಳಲು ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ, ಸಮಸ್ಯೆ ಎದುರಾಗಿದೆ. ಮಳೆ ನೀರು ಜಮೀನುಗಳಲ್ಲಿ ಸಂಗ್ರಹವಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಂತೋಷ ರಾಜಗುರು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭುವನೇಶ್ವರ ಅವರು ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಯಿತು. ರೈತರಾದ ನಾಗಲಿಂಗಪ್ಪ, ರವಿಕುಮಾರ, ನಾಗಪ್ಪ, ಚಂದಪ್ಪ, ಖಾಜಾ ಹುಸೇನ್, ಬಸಣ್ಣ, ಫಕೀರಪ್ಪ, ನಿರೂಪಾದಿ, ಮಲ್ಲಿಕಾರ್ಜುನ, ಶರಣಬಸವ, ಬಸನಗೌಡ ಪಾಟೀಲ, ರಾಚಪ್ಪ, ರಾಜಶೇಖರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-7624899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.