ರಾಯಚೂರು : ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿ ಪ್ರಗತಿಯಲ್ಲಿದ್ದರೂ, ಸ್ಥಳೀಯ ರೈತರ ಜಮೀನುಗಳಿಗೆ ಹೋಗಲು ಅಗತ್ಯವಿರುವ ಸರ್ವಿಸ್ ರಸ್ತೆ ನಿರ್ಮಿಸದೇ ಹೆದ್ದಾರಿ ಪ್ರಾಧಿಕಾರದವರು ರೈತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಹೆದ್ದಾರಿ ಜಮೀನು ವಂಚಿತ ರೈತ ಹೋರಾಟ ಸಮಿತಿಯ ಸಂಚಾಲಕ ಶರಣಪ್ಪ ಉದ್ಬಾಳ ಅಸಮಾಧಾನ ವ್ಯಕ್ತಪಡಿಸಿದರು.

‘ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಯೋಜನೆಯಿಂದಾಗಿ ರೈತರು ಸಂಕಷ್ಟಗಳನ್ನು ಎದುರಿಸುತಿದ್ದು ಹೆದ್ದಾರಿ ನಿರ್ಮಾಣಕ್ಕಾಗಿ ಈ ಹಿಂದೆ ಗ್ರಾಮಗಳಲ್ಲಿ ಸಭೆ ನಡೆಸಿದ್ದ ಪ್ರಾಧಿಕಾರದ ಅಧಿಕಾರಿಗಳು, ರೈತರ ಜಮೀನುಗಳಿಗೆ ಹೋಗಲು ಸರ್ವಿಸ್ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಭೂಮಿ ಸ್ವಾಧೀನಪಡಿಸಿಕೊಂಡು ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದ್ದರೂ, ಸರ್ವಿಸ್ ರಸ್ತೆ ನಿರ್ಮಿಸುವ ಯಾವುದೇ ಯೋಜನೆಯೇ ಇಲ್ಲ ಎಂದು ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. ಮಸ್ಕಿ ತಾಲ್ಲೂಕಿನ ಗೋನವಾರ, ಮಸ್ಕಿ, ಕಾರ್ಲಕುಂಟೆ, ಬಸಾಪುರ ಸೇರಿದಂತೆ ಒಟ್ಟು ಐದು ಗ್ರಾಮಗಳ ವ್ಯಾಪ್ತಿಯ ರೈತರ ಜಮೀನುಗಳಿಗೆ ಹೋಗಲು ಈಗ ಯಾವುದೇ ದಾರಿಯಿಲ್ಲದಂತಾಗಿದೆ’ ಎಂದು ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ಈ ಸಮಸ್ಯೆಯ ಕುರಿತು ಅನೇಕ ಬಾರಿ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದ್ದರೂ ಅಧಿಕಾರಿಗಳು ಉಡಾಫೆಯಾಗಿ ಪ್ರತಿಕ್ರಿಯಿಸಿದ್ದಾರೆಯೇ ಹೊರತು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಜಿಲ್ಲೆಯ ಸಚಿವರು ಮತ್ತು ಶಾಸಕರು ತಕ್ಷಣ ರೈತರಿಗೆ ಎದುರಾಗಿರುವ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಒಂದು ವೇಳೆ ಶೀಘ್ರವಾಗಿ ಸಮಸ್ಯೆ ಪರಿಹರಿಸದಿದ್ದರೆ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಅಮರೇಗೌಡ ಗೋನವಾರ, ಶಂಕ್ರಣ್ಣ ಸಾಹುಕಾರ, ಸಿದ್ರಾಮಪ್ಪ ಗೋನವಾರ, ದೇವರಡ್ಡಿ ಮೇಟಿ, ಲಿಂಗಣ್ಣ ತೆಕ್ಕಲಕೋಟೆ, ಈರಣ್ಣ ಗುಡಿಹಾಳ, ತಿಪ್ಪನಗೌಡ, ಸುಗರೆಡ್ಡಿ, ಲಾಲಸಾಬ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-32-192523107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.