ರಾಯಚೂರು: ‘ರೈತರು ಬೆಳೆಗಳಿಗೆ ಎಷ್ಟು ಬೇಕೋ ಅಷ್ಟೇ ಪ್ರಮಾಣದಲ್ಲಿ ರಸಗೊಬ್ಬರ ನೀಡಬೇಕು’ ಎಂದು ಜಂಟಿ ಕೃಷಿ ನಿರ್ದೇಶಕ (ಜಾಗೃತ ದಳ) ಶಿವಕುಮಾರ ಪಿ. ಹೇಳಿದರು.

ಇಲ್ಲಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಸಾಯನಿಕ ಗೊಬ್ಬರ ಮಿತ ಬಳಕೆ ಜಾಗೃತಿ ಕಾರ್ಯಕ್ರಮ ಮತ್ತು ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಮಾತನಾಡಿದರು.

‘ರೈತರು ಹೆಚ್ಚಿನ ಪ್ರಮಾಣದಲ್ಲಿ ಸಾರಜನಕವನ್ನು ಹಾಕುತ್ತಿದ್ದಾರೆ. ಈ ವರ್ಷ ಮುಂಗಾರು ಪೂರ್ವದಲ್ಲಿ ದಾಖಲೆ ಪ್ರಮಾಣದಲ್ಲಿ 21 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದೆ. ಜಿಲ್ಲೆಗೆ ಬೇಕಾಗುವ ರಸಗೊಬ್ಬರ ದಾಸ್ತಾನು ಲಭ್ಯವಿದೆ’ ಎಂದು ತಿಳಿಸಿದರು.

‘ಮಾರಾಟಗಾರರು ಸುಳ್ಳು ವದಂತಿ ಹಾಗೂ ಕೃತಕ ಅಭಾವ ಸೃಷ್ಟಿ ಮಾಡಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಪ್ರಕಾಶ್ ಚವಾಣ್ ಮಾತನಾಡಿ,‘ಕೃಷಿ ಪರಿಕರಗಳ ವಿತರಕರು ಹಾಗೂ ಮಾರಾಟಗಾರರ ಮೇಲೆ ಜವಾಬ್ದಾರಿ ಜಾಸ್ತಿಯಾಗಿದೆ. ಬೆಳೆಗೆ ಎಷ್ಟು ಬೇಕೋ ಅಷ್ಟೇ ಪ್ರಮಾಣದಲ್ಲಿ ರಸಗೊಬ್ಬರ ರೈತರಿಗೆ ಕೊಡಬೇಕು’ ಎಂದು ಹೇಳಿದರು.

‘ರಸಗೊಬ್ಬರವನ್ನು ಕೃಷಿ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ಕೈಗಾರಿಕೆ ಚಟುವಟಿಕೆಗಳಿಗೆ ಉಪಯೋಗಿಸದಂತೆ ಎಚ್ಚರವಹಿಸಬೇಕು’ ಎಂದರು.

‘ರೈತರ ನೋಂದಣಿ ಮತ್ತು ಫಲಾನುಭವಿ ಮಾಹಿತಿ, ಭೂಮಿ ವಿವರ, ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆಯ ಮಾಹಿತಿಯನ್ನೊಳಗೊಂಡ (ಎಫ್ಆರ್ ಯುಐಟಿಎಸ್ ಐಡಿ) ಅನ್ವಯ ರೈತರ ಜಮೀನಿನ ವಿಸ್ತೀರ್ಣ ಹಾಗೂ ಬೆಲೆಗೆ ತಕ್ಕಂತೆ ರೈತರಿಗೆ ಅಗತ್ಯ ಇರುವಷ್ಟು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ನಿರ್ದೇಶಕ ಎ.ಆರ್.ಕುರುಬರ ಮಾತನಾಡಿ, ‘ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಇತ್ತೀಚಿನ ವರದಿ ಪ್ರಕಾರ ದೇಶದಲ್ಲಿ ಹೆಚ್ಚು ಡಿಎಪಿ ರಸಗೊಬ್ಬರ ಬಳಕೆ ಮಾಡುವ 100 ಜಿಲ್ಲೆಗಳಲ್ಲಿ ರಾಯ ಚೂರು 5ನೇ ಸ್ಥಾನದಲ್ಲಿದೆ’ ಎಂದು ಹೇಳಿದರು.

‘ರಾಜ್ಯದ ಇತರ ಜಿಲ್ಲೆಗಳಾದ ಯಾದಗಿರಿ 35, ಬೆಳಗಾವಿ 45, ವಿಜಯಪುರ 72, ಕಲಬುರಗಿ 74ನೇ ಸ್ಥಾನಗಳಲ್ಲಿವೆ. ಈ ಅಂಕಿ–ಅಂಶ ಕಳವಳಕಾರಿಯಾಗಿದ್ದು, ನಾವೆಲ್ಲರೂ ಜಾಗೃತರಾಗಬೇಕು. ಗುಣಮಟ್ಟದ ಆಹಾರ ಉತ್ಪಾದನೆಗೆ ಒತ್ತು ಕೊಡಬೇಕು’ ಎಂದರು.

ಬೇಸಾಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಜಯಕುಮಾರ ಮಾತನಾಡಿ ಭತ್ತ, ಹತ್ತಿ, ಜೋಳ ಮತ್ತು ಮೆಣಸಿನಕಾಯಿ ಬೆಳೆಗಳಲ್ಲಿ ರಾಸಾಯನಿಕ ಗೊಬ್ಬರಗಳ ಮಿತ ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ರೆಹಮಾನ್ ಸಾಬ್ ಜಾಲಿಹಾಳ, ಉಪ ನಿರ್ದೇಶಕ ಮೃತ್ಯುಂಜಯ ಪತಂಗಿ, ಸಹಾಯಕ ಕೃಷಿ ನಿರ್ದೇಶಕಿ ಶರಣಮ್ಮ ಪಾಟೀಲ, ಜಿಲ್ಲೆಯ ವಿವಿಧ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.

ನಯೀಮ್ ಹುಸೇನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಮ್ಮಣ್ಣ ನಾಯಕ ಸ್ವಾಗತಿಸಿದರು. ಮತ್ತುರಾಜ್ ವಂದಿಸಿದರು.

130ಕ್ಕೂ ಹೆಚ್ಚು ಕೃಷಿ ಪರಿಕರ ವಿತರಕರು, ಮಾರಾಟಗಾರರು ಭಾಗವಹಿಸಿ ಮಾಹಿತಿ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-2072720537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.