ರಾಯಚೂರು: ‘ರಾಜ್ಯದಲ್ಲಿ 38 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಹಾಗೂ 14 ಸಾವಿರ ಟನ್ ಯೂರಿಯಾ ಕೊರತೆ ಇದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿರುವುದು ಆತಂಕಕಾರಿ ವಿಷಯವಾಗಿದ್ದು, ಇದು ಕೃಷಿ ಚಟುವಟಿಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಹೇಳಿದರು.

‘ಇನ್ನೂ ಮುಂಗಾರು ಆರಂಭ ವಾಗಿಲ್ಲ. ಈಗಲೇ ಇಷ್ಟು ಸಮಸ್ಯೆ ಇದ್ದರೆ, ಕೃಷಿ ಚಟುವಟಿಕೆಗಳು ಆರಂಭವಾದಾಗ ಸಮಸ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.

‘ಡಿಎಪಿ ಮತ್ತು ಯೂರಿಯಾ ಗೊಬ್ಬರದ ಬೆಲೆ ಸ್ಥಿರವಾಗಿದ್ದರೂ, ಇತರ ಗೊಬ್ಬರಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ರಸಗೊಬ್ಬರ ಕಳ್ಳ ಮಾರ್ಗದಿಂದ ಮಾರಾಟವಾಗುವ ಸಾಧ್ಯತೆಗಳಿವೆ. ರಾಜ್ಯ ಸರ್ಕಾರ ಎಷ್ಟೇ ಕಠಿಣ ನಿಯಮ ರೂಪಿಸಿದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಕೃಷಿ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ’ ಎಂದು ದೂರಿದರು.

‘ಸರ್ಕಾರದ ದಾಖಲೆಗಳಲ್ಲಿ ರೈತರ ಭೂಮಿಯ ಎಲ್ಲಾ ಪಹಣಿ ನಂಬರ್ ಇದೆ. ರೈತರ ಭೂಮಿಯ ವಿಸ್ತೀರ್ಣಕ್ಕೆ ಅನುಗುಣವಾಗಿ ಗೊಬ್ಬರ ವಿತರಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದರೂ ನಮ್ಮ ಉತ್ಪನ್ನಗಳಿಗೆ ಬೆಲೆ ಸರಿ ಹೊಂದುತ್ತಿಲ್ಲ. ಯಾವ ಸರ್ಕಾರಗಳೂ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದರು.

‘ಜೋಳ ಖರೀದಿ ಕೇಂದ್ರದಲ್ಲಿ ನಿಜವಾದ ರೈತರ ಹೆಸರು ಡಿಲೀಟ್ ಆಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ದೇವರಾಜ ನಾಯಕ, ಶಂಕ್ರಪ್ಪ, ಯಂಕಪ್ಪ ಪ್ರಭಾಕರ ಪಾಟೀಲ, ಮಲ್ಲಪ್ಪ ದಿನ್ನಿ, ಗೋವಿಂದ ನಾಯಕ, ಶಂಕರಗೌಡ, ಬೂದೆಯ್ಯ ಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-276646166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.