ರಾಯಚೂರು: ‘ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾಧ್ಯವಾಗಲಿದೆ’ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಪಾಲಿಕೆ ಆರೋಗ್ಯಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮನವಿ ಮಾಡಿದರು.

ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿ ಕಾರ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಲೇರಿಯಾ ದಿನದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಗರದ ಎಲ್ಲ ಪ್ರದೇಶಗಳಲ್ಲಿ ಮನೆಯ ಸುತ್ತಲಿನ ಜಾಗಗಳಲ್ಲಿ ಶಾಶ್ವತ ನೀರು ನಿಲ್ಲುವ ಸ್ಥಳಗಳಿದ್ದರೆ ನೀರು ನಿಲ್ಲದಂತೆ ನಿಗಾ ವಹಿಸಲು ಜನತೆಗೆ ತಿಳಿವಳಿಕೆ ನೀಡಬೇಕು. ಮುಖ್ಯವಾಗಿ ಮಲೇರಿಯಾ ಹರಡುವ ಅನಾಫಿಲಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಬೇಕು. ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದು ತಿಳಿಸಿದರು.

ಜಿಲ್ಲಾ ಡಿಪಿಡಿಒ ಡಾ. ಚಂದ್ರಶೇಖರಯ್ಯ ಸ್ವಾಮಿ ಮಾತನಾಡಿ, ‘ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಮಲೇರಿಯಾದ ಲಕ್ಷಣಗಳಾಗಿವೆ. ಈ ಲಕ್ಷಣ ಕಂಡಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಲಿ ರಕ್ತ ಲೇಪನ ಪರೀಕ್ಷೆ ಮಾಡಿಸಬೇಕು’ ಎಂದರು.

ಮಲೇರಿಯಾ ಪ್ರಕರಣಗಳ ತಡೆಗೆ ಮನೆಯ ಒಳಭಾಗ ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರು ಸಹಕರಿಸಬೇಕು. ಸ್ವಯಂ ರಕ್ಷಣಾ ಕ್ರಮಗಳಾದ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಕಿಟಕಿಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸಬೇಕು. ಆರೋಗ್ಯ ಇಲಾಖೆಯಿಂದ ನೀಡಲ್ಪಡುವ ಲಾರ್ವಾ ಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಬಿಡಲು ಉಚಿತವಾಗಿ ಪಡೆಯಬಹುದಾಗಿದೆ ಎಂದರು. ಮಹಾನಗರಪಾಲಿಕೆಯ ಪರಿಸರ ಎಂಜಿನಿಯರ್ ಜಯಪಾಲ ರೆಡ್ಡಿ, ಬಿಎಚ್ಇಒ ಸರೋಜಾ ಕೆ, ಎಮ್ಟಿಎಸ್ ಸಂಧ್ಯಾ ಸೇರಿ ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆಯ ಸಿಬ್ಬಂದಿಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-760461840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.