ರಾಯಚೂರು: ಮಟ್ಕಾ ಜೂಜಾಟ, ಸೇಂದಿ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಗಡಿಪಾರು ಮಾಡಿ ಲಿಂಗಸುಗೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರ ಶಿಫಾರಸ್ಸಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಮಸ್ಕಿ ತಾಲ್ಲೂಕಿನ ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯ ನಂಜಲದಿನ್ನಿ ಗ್ರಾಮದ ವ್ಯಕ್ತಿಯ ವಿರುದ್ಧ ಒಸಿ, ಮಟ್ಕಾ ಸೇರಿದಂತೆ 14 ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ವಿಜಯಪುರ ಜಿಲ್ಲೆಯ ನಿಡಗುಂದಿ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಮಸ್ಕಿ ತಾಲ್ಲೂಕಿನ ತುರ್ವಿಹಾಳ ಠಾಣೆ ವ್ಯಾಪ್ತಿಯ ಸಿಂಧನೂರು ತಾಲ್ಲೂಕಿನ ಜಂಬುನಾಥಹಳ್ಳಿ ವ್ಯಕ್ತಿಯ ವಿರುದ್ಧ ಒಸಿ, ಮಟ್ಕಾ ಸೇರಿ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕೆ 24 ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ತುರ್ದಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಕಣ್ಣೂರು ಗ್ರಾಮದ ನಿವಾಸಿಯ ವಿರುದ್ಧ ಒಸಿ, ಮಟ್ಕಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಕ್ಕೆ 26 ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ರಾಯಚೂರು ತಾಲ್ಲೂಕಿನ ಕಾಕನಗೇರಿ ಗ್ರಾಮದ ನಿವಾಸಿಯ ವಿರುದ್ಧ ಒಸಿ ಹಾಗೂ ಮಟ್ಕಾ ಸೇರಿದಂತೆ 8 ಪ್ರಕರಣಗಳು ದಾಖಲಾಗಿದ್ದು, ಆರೋಪಿಯನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಕಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ರಾಯಚೂರು ನಗರದ ಮಂಗಳವಾರ ಪೇಟೆ ನಿವಾಸಿಯ ವಿರುದ್ಧ ಸೇಂದಿ ಹಾಗೂ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿದ್ದಕ್ಕೆ 9 ಪ್ರಕರಣಗಳು ದಾಖಲಾಗಿದ್ದು, ಆರೋಪಿಯನ್ನು ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಚಿಂತಾಕಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಜಿಲ್ಲೆಯಲ್ಲಿ ಒಸಿ, ಮಟ್ಕಾ ಸೇಂದಿ, ಗಾಂಜಾ ಸೇರಿದಂತೆ ಇತರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-32-300808104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.