ರಾಯಚೂರು: ‘ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆ ಮಾಡಬೇಕು’ ಎಂದು ಒತ್ತಾಯಿಸಿ ಸಿಪಿಐ (ಎಂಎಲ್) ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಕೇಂದ್ರ ಸರ್ಕಾರದ ಆರ್ಥಿಕ ಮುಗ್ಗಟ್ಟು ಸರಿಪಡಿಸಿಕೊಳ್ಳಲು ವಿದೇಶಿ ಮತ್ತು ಸ್ವದೇಶಿ ಕಾರ್ಪೊರೇಟ್ ಕಂಪನಿಗಳಿಗೆ ಶೇ 32ರಿಂದ ಶೇ 42ರಷ್ಟು ತೆರಿಗೆ ವಿಧಿಸಬೇಕು. ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳದಿಂದ ರಸಗೊಬ್ಬರ, ಬೀಜ ಹಾಗೂ ಇತರೆ ಸಲಕರಣೆಗಳ ಬೆಲೆ ಹೆಚ್ಚಳವಾಗಿದೆ. ಈ ಕಾರಣದಿಂದ ರೈತರಿಗೆ ವಿಶೇಷ ಅನುದಾನದ ಅಡಿಯಲ್ಲಿ ಹಣ ಮಂಜೂರು ಮಾಡಿ, ರೈತರ ಕೃಷಿಗೆ ಅನುಕೂಲ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿ ಮಾಡಬಾರದು. ನರೇಗಾ ಯೋಜ ನೆಯನ್ನು ಪುನಃ ಜಾರಿಗೊಳಿಸಬೇಕು. ಸರ್ಕಾರಿ ಹೆಚ್ಚುವರಿ, ಗೈರಾಣ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವ ಸಣ್ಣ ರೈತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಮತ್ತು ಅಕ್ರಮ ಸಕ್ರಮ ಕಾಯ್ದೆಯಡಿ ನಮೂನೆ–57 ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರಾತಿ ಕೊಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಿ.ಎಚ್.ಪೂಜಾರ್, ಬಿ.ಎನ್.ಯರದಿಹಾಳ, ಅಶೋಕ ನೀಲಗಲ್, ಶೇಖರಯ್ಯ ಗೆಜ್ಜಲಗಟ್ಟ, ಹುಲಿಗೆಪ್ಪ ಸಿರವಾರ, ರಮೇಶ ಪಾಟೀಲ, ಯಲ್ಲಪ್ಪ, ಬಸಪ್ಪ, ಶಿವರಾಜ, ಬಸವರಾಜ, ಶರಣಪ್ಪ, ನಾಗರಾಜ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-674192029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.