ರಾಯಚೂರು: ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಲ್ಲೆಸುಗೂರು ಕ್ಯಾಂಪ್ನಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಸಿ.ಎಚ್.ಪೌಡರ್ನಿಂದ ತಯಾರಿಸಿದ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಗಿಲ್ಲೆಸುಗೂರು ಕ್ಯಾಂಪ್ನ ರಾಜಕುಮಾರ ಬಂಧಿತ.

ಖಚಿತ ಮಾಹಿತಿ ಮೇರೆಗೆ ಪಿಎಸ್ಐ, ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಪಂಚರೊಂದಿಗೆ ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ಪರಿಶೀಲಿಸಿದಾಗ, ಆರೋಪಿಯು 3 ಪ್ಲಾಸ್ಟಿಕ್ ಕೊಡಗಳು ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ ಇಟ್ಟುಕೊಂಡು ಜಗ್ನಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ನಲ್ಲಿ ಸೇಂದಿ ತುಂಬಿ ಜನರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಆರೋಪಿಯಿಂದ 3 ಪ್ಲಾಸ್ಟಿಕ್ ಕೊಡಗಳಲ್ಲಿಯ 54 ಲೀಟರ್ ಹಾಗೂ ಒಂದು ದೊಡ್ಡ ಪ್ಲಾಸ್ಟಿಕ್ ಕ್ಯಾನ್ನಲ್ಲಿಯ 30 ಲೀಟರ್ ಸೇರಿ ಒಟ್ಟು 84 ಲೀಟರ್ ಕಲಬೆರಕೆ ಸೇಂದಿ, ₹1680 ವಶಪಡಿಸಿಕೊಳ್ಳಲಾಗಿದೆ.

ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-32-1348177623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.