ಸಿರವಾರ: ‘ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕು ಮತ್ತು ಅಫಜಲಪುರ ತಾಲ್ಲೂಕಿನಲ್ಲಿ ಅಂತರ್ಜಲ ಪ್ರಮಾಣ ಕುಸಿತವಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಂತರ್ಜಲ ಹೆಚ್ಚಳಕ್ಕೆ ಪೂರಕ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು.

ತಾಲ್ಲೂಕಿನ ನವಲಕಲ್ ಗ್ರಾಮದಲ್ಲಿ ಸಣ್ಣನೀರಾವರಿ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ರೈತರಿಗೆ ಕೊಳವೆಬಾವಿ ಯಂತ್ರ, ಪಂಪಸೆಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಲಾಖೆಯಿಂದ ಸಿಗುವ ಯೋಜನೆಗಳ ಪ್ರಯೋಜನ ಪಡೆದು ರೈತರು ಆರ್ಥಿಕವಾಗಿ ಸದೃಢರಾಗಬೇಕು. ಕೊಳವೆಬಾವಿ ಮತ್ತು ಯಂತ್ರಗಳನ್ನು ಪಡೆಯಲು ಮದ್ಯವರ್ತಿಗಳ ಬಳಿ ಹೋಗದೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ರೈತರಿಗೆ ಸಲಹೆ ನೀಡಿದರು.

ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ, ‘ಈ ಭಾಗದಲ್ಲಿನ ನೀರಿನ ಸಮಸ್ಯೆ ಕುರಿತು ಸಚಿವರು ನೀಡಿದ ಮಾಹಿತಿ ಆಧರಿಸಿ ಮುಖ್ಯಮಂತ್ರಿಯವರು ‘ನೀರಿದ್ದರೆ ನಾಳೆ’ ಯೋಜನೆಯಡಿ ₹100 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ’ ಎಂದು ಹೇಳಿದರು.

ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಶಾಸಕ ಡಿ.ಎಸ್. ಹುಲಿಗೇರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿಚೌದ್ರಿ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶಿವಮೂರ್ತಿ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಬಸವರಾಜ ಅತ್ತನೂರು, ದಾನನಗೌಡ, ಚಂದ್ರು ಕಳಸ, ಕೆ.ಬಸವರಾಜ, ಕಿರಲಿಂಗಪ್ಪ, ಚುಕ್ಕಿ ಶಿವಕುಮಾರ, ಭೂಪನಗೌಡ, ಶ್ರೀನಿವಾಸ ಜಾಲಾಪುರ, ಎನ್.ರೇಣುಕಾ, ತಹಶೀಲ್ದಾರ್ ಅಶೋಕ ಪವಾರ, ತಾ.ಪಂ ಇಒ ಶಶಿಧರಸ್ವಾಮಿ ಮಠದ, ಎಇಇ ಲೋಕೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-32-1849318728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.