ರಾಯಚೂರು: ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ಹಣ ಬಿಡುಗಡೆಯಾಗದಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ‘ಸೆಪ್ಟೆಂಬರ್ ಹಣ ಬಂದಿಲ್ಲ. ಸೆಪ್ಟೆಂಬರ್ ಹಣ ತಡೆ ಹಿಡಿಯುವಂತೆ ಸರ್ಕಾರ ನಿರ್ದೇಶನ ನೀಡಿದೆ’ ಎಂದು ಸಭೆಗೆ ತಿಳಿಸಿದಾಗ ಒಂದು ಕ್ಷಣ ವಿಚಲಿತರಾದರು.

ರಿತೇಶಕುಮಾರ್ ಸಿಂಗ್ ಅವರು ನೇರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಕರೆ ಮಾಡಿ ವಿಚಾರಿಸಿ ಮಾಹಿತಿ ಪಡೆದುಕೊಂಡರು. ನಂತರ, ‘ಸರ್ಕಾರದಿಂದ ಅಂತಹ ಯಾವುದೇ ನಿರ್ದೇಶನ ಬಂದಿಲ್ಲ‘ ಎಂದು ಸ್ಪಷ್ಟಪಡಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳ ಲೋಪದಿಂದ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಿಲ್ಲ‘ ಎಂದು ಬೇಸರ ವ್ಯಕ್ತಪಡಿಸಿದರು.

‘ಗೃಹಲಕ್ಷ್ಮಿ ಫಲಾನುಭವಿಗಳಿಗೆ ಪ್ರತಿ ತಿಂಗಳು ₹ 2ಸಾವಿರ ಹಣ ಬಿಡುಗಡೆಗೆ ವಿಳಂಬವಾಗದಂತೆ ಕ್ರಮವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ

‘ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶಕುಮಾರ್ ಸಿಂಗ್ ಹೇಳಿದರು.

ರಾಯಚೂರು ಎಸ್ಎಸ್ಎಲ್ಸಿ, ಪಿಯುಸಿ ಫಲಿತಾಂಶ ಕುಸಿತ ಕಂಡಿದೆ. ದೇವದುರ್ಗ ತಾಲ್ಲೂಕಿನ 17 ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ. ಈ ತಾಲ್ಲೂಕಿನ ಮಕ್ಕಳಿಗೆ ಬರವಣಿಗೆ ಕೌಶಲವಿಲ್ಲ ಎಂಬ ಮಾಹಿತಿಯಿದೆ. ರಾಯಚೂರು ನಗರ ವ್ಯಾಪ್ತಿಯಲ್ಲಿ 60 ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ. ವಾರದಲ್ಲಿ 2, 3 ಶಾಲೆಗಳಿಗೆ ಆಯಾ ತಾಲ್ಲೂಕು ವ್ಯಾಪ್ತಿಯ ನೋಡೆಲ್ ಅಧಿಕಾರಿಗಳು ಭೇಟಿ ನೀಡಲೇಬೇಕು’ ಎಂದು ಸೂಚನೆ ನೀಡಿದರು.

‘ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ನಿಲಯಗಳಿಗೆ ಗುಣಮಟ್ಟದ ಆಹಾರ ಧಾನ್ಯ ಪೂರೈಸಬೇಕು. ಕಡ್ಡಾಯವಾಗಿ ಬಯೊಮೆಟ್ರಿಕ್ನಲ್ಲಿನ ಮಕ್ಕಳ ಹಾಜರಾತಿಯನ್ನೇ ಪರಿಗಣನೆಗೆ ಪಡೆಯಬೇಕು‘ ಎಂದು ಹೇಳಿದರು.

‘ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ಯಂತ್ರಗಳನ್ನು ಅಳವಡಿಸಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಬೇಕು’ ಎಂದು ಸೂಚನೆ ನೀಡಿದರು.

‘ರಾಯಚೂರು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಹೆಚ್ಚಾಗಿ ಭತ್ತ, ಹತ್ತಿ ಮತ್ತು ತೊಗರಿ ಬೆಳೆ ಬಿತ್ತನೆಯಾಗಿದೆ. ಅತಿವೃಷ್ಟಿಯಿಂದ ಹತ್ತಿ, ಭತ್ತ, ತೊಗರಿ, ಜೋಳ ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಂಟಿ ಸರ್ವೆ ಕಾರ್ಯ ಪ್ರಗತಿಯಲ್ಲಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಸಭೆಗೆ ಮಾಹಿತಿ ನೀಡಿದರು.

‘ಸಮೀಕ್ಷೆ ಕಾರ್ಯವನ್ನು ಶೀಘ್ರವೇ ಪೂರ್ಣಗೊಳಿಸಬೇಕು’ ಎಂದು ಕಾರ್ಯದರ್ಶಿಗಳು ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಮೂರು ಅಲ್ಪಸಂಖ್ಯಾತರ ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅವುಗಳಲ್ಲಿ 2 ವಸತಿ ನಿಲಯಗಳಿಗೆ ನಿವೇಶನ ಲಭ್ಯವಿದೆ. ಒಂದಕ್ಕೆ ನಿವೇಶನ ಅಗತ್ಯವಿದ್ದು, ಅದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದರು.

ಪಿಡಿಒಗೆ ಪ್ರಶಸ್ತಿ ವಿತರಣೆ

ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಅತ್ಯುತ್ತಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ರಾಯಚೂರು ತಾಲ್ಲೂಕಿನ ಬಿಚ್ಚಾಲಿಯ ಪಿಡಿಒ ಮಾಳಮ್ಮ ಅವರಿಗೆ ಸೆಪ್ಟೆಂಬರ್ ತಿಂಗಳಿನ ಪ್ರಶಂಸನೀಯ ಪ್ರಮಾಣ ಪತ್ರವನ್ನು ಕಾರ್ಯದರ್ಶಿ ನೀಡಿ ಪ್ರೋತ್ಸಾಹಿಸಿದರು.

ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಟಿ, ಯೋಜನಾ ನಿರ್ದೇಶಕ ಶರಣಬಸವರಾಜ ಕೆ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.