ರಾಯಚೂರು: ‘ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮಾ ಆಗುವ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಬಲವಂತವಾಗಿ ಜಮಾ ಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಜಮಾ ಆದ ಹಣವನ್ನು ಬಲವಂತವಾಗಿ ಅವರ ಸಾಲದ ಖಾತೆಗೆ ಜಮಾ ಅಥವಾ ವರ್ಗಾವಣೆ ಮಾಡಿದರೆ, ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೂಕದ್ದಮೆ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

‘ಈಗಾಗಲೇ ಸಾಲಕ್ಕೆ ಮುರಿದುಕೊಂಡಿರುವ ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳ ಎಸ್.ಬಿ ಖಾತೆಗೆ ಹಿಂತಿರುಗಿಸುವಂತೆ ಎಲ್ಲ ಬ್ಯಾಂಕ್ಗಳ ಜಿಲ್ಲಾ ಸಂಯೋಜಕರಿಗೆ ನಿರ್ದೇಶನ ನೀಡಲಾಗಿದೆ. ಇಂತಹ ಘಟನೆಗಳು ಪುನರಾವರ್ತಿತಗೊಂಡಲ್ಲಿ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಫ್.ಐ.ಆರ್ ದಾಖಲಿಸುವುದರೊಂದಿಗೆ ಸೂಕ್ತ ಕ್ರಮಕ್ಕೆ ಅವರ ಮೇಲಧಿಕಾರಿಗೆ ಶಿಫಾರಸು ಮಾಡಲಾಗುವುದು’ ಎಂದರು.

‘ಫಲಾನುಭವಿಗಳು ಈ ಸಂಬಂಧ ದೂರುಗಳಿದ್ದರೆ https://cms.rbi.org.in ಪೋರ್ಟಲ್ ನಲ್ಲಿ ಅಥವಾ 14448 ಸಂಖ್ಯೆಗೆ ಕಾಲ್ ಮಾಡುವ ಮೂಲಕ ದಾಖಲಿಸಬಹುದಾಗಿದೆ’ ಎಂದು ತಿಳಿಸಿದರು.

‘ಇದಕ್ಕೆ ಸಂಬಂಧಿಸಿದಂತೆ ಸೂಚನಾ ಫಲಕವನ್ನು ಎಲ್ಲಾ ಬ್ಯಾಂಕ್ಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಲಾಗಿದೆ’ ಎಂದು ಲೀಡ್ ಬ್ಯಾಂಕ್ ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.