ರಾಯಚೂರು: ಹವಾಮಾನ ಇಲಾಖೆಯ ವರದಿಯ ಪ್ರಕಾರ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ ಬೀಸಲಿದೆ.

ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ತೆಳುವಾದ, ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಮಾಡಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಪಾದರಕ್ಷೆಗಳನ್ನು ಬಳಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಭಾರ ಜಿಲ್ಲಾಧಿಕಾರಿ ಈಶ್ವರಕುಮಾರ ಕಾಂದೂ ತಿಳಿಸಿದ್ದಾರೆ.

ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ ಜತೆಯಲ್ಲಿ ನೀರನ್ನು ತೆಗೆದುಕೊಂಡು ಹೋಗಬೇಕು. ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-32-499931442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.