ರಾಯಚೂರು: ‘ರಕ್ತಸ್ರಾವ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಿಮೋಫಿಲಿಯಾ ಇಂಜೆಕ್ಷನ್ ನೀಡುತ್ತಿದ್ದು, ಕಾಯಿಲೆಗೆ ಒಳಗಾದ ಮಕ್ಕಳು ಇದರ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಸಲಹೆ ನೀಡಿದರು.

ಇಲ್ಲಿನ ರಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಕುಸುಮ ಸಂಜೀವಿನಿ ಯೋಜನೆಯಡಿ ಈಚೆಗೆ ಹಮ್ಮಿಕೊಂಡಿದ್ದ ಚುಚ್ಚುಮದ್ದು ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಗಗಾಲೇ 18 ಜನರಿಗೆ ಚುಚ್ಚುಮದ್ದು ನೀಡಲಾಗಿದ್ದು, ಒಂದು ಇಂಜೆಕ್ಷನ್ ಬೆಲೆ ₹1.4 ಲಕ್ಷ ಆಗಲಿದೆ. ಇದರಿಂದ ಹಿಮೋಫಿಲಿಯಾ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಆರ್.ಸಿ.ಆರ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಮಾತನಾಡಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಸೂರ್ಯಕಾಂತ ಎಂ, ರಿಮ್ಸ್ ಕಾಲೇಜಿನ ಪ್ರಾಚಾರ್ಯ ರಾಹುಲ್ ಸಿ.ಕೀರ್ತೆ, ತಜ್ಞ ವೈದ್ಯ ಡಾ.ಬಸವರಾಜ, ಮಕ್ಕಳ ತಜ್ಞ ಡಾ.ಸುಕಾಣಿ, ಡಾ.ನಸೀಮಾ ಬೇಗಂ, ಪೆಥಾಲಜಿಸ್ಟ್ ಡಾ.ರಶೀದ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್ ಅವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-32-1189258068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.