ರಾಯಚೂರು: ಹವಾಮಾನ ಇಲಾಖೆ ವರದಿಯ ಪ್ರಕಾರ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಅವಶ್ಯಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಎಸ್.ಪೂವಿತಾ ಸಲಹೆ ನೀಡಿದ್ದಾರೆ.

ಅಧಿಕ ಉಷ್ಣಾಂಶ ಹಾಗೂ ಬಿಸಿ ಗಾಳಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಸಾರ್ವಜನಿಕರು ರೇಡಿಯೊ, ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು ಎಂದು ತಿಳಿಸಿದ್ದಾರೆ.

ತೆಳುವಾದ, ಸಡಿಲವಾದ ಹತ್ತಿ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆ ಬಳಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ. ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡಬೇಕು. ಪ್ರಯಾಣದಲ್ಲಿ ನೀರು ಜತೆಗೆ ಇಟ್ಟುಕೊಳ್ಳಬೇಕು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್ತು, ನಿಂಬೆ ನೀರು, ಮಜ್ಜಿಗೆ ಸೇವಿಸಬೇಕು. ಪ್ರಾಣಿ ಅಥವಾ ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು ಎಂದು ತಿಳಿಸಿದ್ದಾರೆ.

ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

ನವಜಾತ ಶಿಶುಗಳು, ಹಿರಿಯ ನಾಗರಿಕರು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-152098473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.