ರಾಯಚೂರು : ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ರದ್ದುಪಡಿಸಿದ್ದನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ಜಿಲ್ಲಾ ಘಟಕ ಸ್ವಾಗತಿಸಿದೆ.

ಹಿಂದಿನ ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಬಳಸಿಕೊಂಡು ಹಿಜಾಬ್ ವಿಷಯವನ್ನು ಅನಗತ್ಯ ವಿವಾದವನ್ನಾಗಿ ಮಾಡಿತ್ತು. ಇದು ಸಂವಿಧಾನಾತ್ಮಕ ಹಕ್ಕುಗಳಿಗೆ ವಿರುದ್ಧವಾಗಿರುವುದರ ಜೊತೆಗೆ ಸಮಾಜದಲ್ಲಿ ಧಾರ್ಮಿಕ ಧ್ರುವೀಕರಣ ಸೃಷ್ಟಿಸುವ ಪ್ರಯತ್ನವಾಗಿತ್ತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ಶೇಕ್ ಫರೀದ್ ಉಮರಿ ಹೇಳಿದ್ದಾರೆ.

ಹಿಜಾಬ್ ಎನ್ನುವುದು ಕೇವಲ ಉಡುಪಿನ ವಿಚಾರವಲ್ಲ; ಅದು ಭಾರತದ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಹಕ್ಕಿನ ಭಾಗವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ವಿದ್ಯಾರ್ಥಿನಿಯರು ತರಗತಿಗಳಿಂದ ದೂರ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲವು ವಿದ್ಯಾರ್ಥಿನಿಯರು ಶಿಕ್ಷಣವೇ ಕೈಬಿಡಬೇಕಾದ ನೋವಿನ ಸ್ಥಿತಿಗೂ ತಲುಪಿದ್ದರು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-1957283022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.