ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಗುರು ಬೋಳಬಸವೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏ.20 ರಂದು ಸಾಮೂಹಿಕ ವಿವಾಹ, ಉಡಿ ತುಂಬುವ ಕಾರ್ಯಕ್ರಮ, ಆಧ್ಯಾತ್ಮಿಕ, ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಸ್ಥಾನದ 5ನೇ ಪಟ್ಟಾಧ್ಯಕ್ಷ ಎಸ್.ನರಸಣ್ಣ ಪೂಜಾರಿ ತಿಳಿಸಿದರು.

ಅಂದು ಬೆಳಿಗ್ಗೆ ವಿಶೇಷ ಜಲಾಭಿಷೇಕ ಮತ್ತು ಬಿಲ್ವಾರ್ಚನೆ ನಡೆಯಲಿದೆ. ಕಾಗೋನೆಟ್ ಕಲಾವಿದರು, ಗಣಪತಿ ಶಾರದಾ ಪೂಜಾರಿ ದಿನ್ನಿ ಮತ್ತು ತಬಲಾ ಸಾಥ್ ರಾಘವೇಂದ್ರ ನಾಯಕ, ಕೆ. ಮಹಾಲಕ್ಷ್ಮೀ ಅವರಿಂದ ಸಂಗಿತ ಕಾರ್ಯಕ್ರಮ ನಡೆಯಲಿದೆ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಮಧ್ಯಾಹ್ನ12 ರಿಂದ 12.36 ರವರೆಗೆ 11 ಸಾಮೂಹಿಕ ವಿವಾಹ ಕಾರ್ಯಕ್ರಮ, ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆ ನಡೆಯಲಿದೆ. ಹೊಕ್ರಾಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠದ ಮಠಾಧಿಶರು, ಶಾಸಕರು, ಜನ ಪ್ರತಿನಿಧಿಗಳು ಪಾಲ್ಗೊಳ್ಳವರು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಶಿವುಕುಮಾರ, ಉದಯಕುಮಾರ, ನರಸಿಂಹ ದೊರೆ, ಮಾರುತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-1702264660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.