ರಾಯಚೂರು: ನಗರದ ಸಿಯಾತಲಾಬ್ನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ನಿಗಮದಿಂದ ನಡೆಯುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಪರಿಶೀಲನೆ ಮಾಡಿದರು.

ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಿವಾಸಿಗಳು ತಮ್ಮ ಅಳಲು ತೋಡಿಕೊಂಡು ಅನಗತ್ಯವಾಗಿ ಮನೆಗಳ ನಿರ್ಮಾಣ ವಿಳಂಬ ಮಾಡುತ್ತಿದ್ದಾರೆ, ನಾವು ರಸ್ತೆಯ ಮೇಲೆ ಇರುವಂತಾಗಿದೆ ಎಂದು ದೂರಿದರು.

ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಒಟ್ಟು 108 ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ವಿಳಂಬ ವಾಗುತ್ತಿರುವುದನ್ನು ಸಹಿಸಲು ಸಾದ್ಯವಿಲ್ಲ. ಕಾಮಗಾರಿ ವಿಳಂಬವಾದರೇ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಯೋಜನಾ ಆಯೋಗದ ಸದಸ್ಯ ರಝಾಕ್ ಉಸ್ತಾದ್, ಕೆ.ಅಸ್ಲಂ ಪಾಶಾ, ಮೊಹಮ್ಮದ್ ಉಸ್ಮಾನ್, ಕೆ.ಇ.ಕುಮಾರ, ರಮೇಶ ರೋಸ್ಲಿ, ಅಂಜಿನಕುಮಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-32-1071885046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.