ರಾಯಚೂರು: ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ ಸಂಘಟನೆಯಿಂದ ಏ.19ರಂದು ಬೆಳಿಗ್ಗೆ 10.30ಕ್ಕೆ ಎ.ಪಿ.ಎಂ.ಸಿ ಸಭಾಂಗಣದಲ್ಲಿ ‘ಪ್ರಾದೇಶಿಕ ಅಸಮಾನತೆ ಗೋವಿಂದರಾವ ಸಮಿತಿ ವರದಿ ಸಾಧ್ಯತೆಗಳು ಹಾಗೂ ಬಾಧ್ಯತೆಗಳು’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ ಸಂಘಟನೆಯ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಅವರು ತಿಳಿಸಿದರು. ಶಾಸಕ ಡಾ.ಶಿವರಾಜ ಪಾಟೀಲ ಉದ್ಘಾಟಿಸುವರು. ಬಸವ ಕೇಂದ್ರದ ಗೌರವಾಧ್ಯಕ್ಷ ಹರವಿ ನಾಗನಗೌಡ ಅಧ್ಯಕ್ಷತೆ ವಹಿಸುವರು ಎಂದು ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಅವರು ಹೇಳಿದರು.

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ರಜಾಕ್ ಉಸ್ತಾದ್, ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಮಾಜಿ ಅಧ್ಯಕ್ಷ ತ್ರಿವಿಕ್ರಮ ಜೋಶಿ ಉಪನ್ಯಾಸ ನೀಡುವರು ಎಂದು ತಿಳಿಸಿದರು.

ಶಾಸಕ ಬಸನಗೌಡ ದದ್ದಲ್, ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪತಿ ಗಾಣದಾಳ, ಚೇಂಬರ್ಸ್ ಆಫ್ ಕಾಮರ್ಸ್ ಅಧ್ಯಕ್ಷ ಕಮಲಕುಮಾರ ಜೈನ್, ಸಾಹಿತಿ ವೀರಹನುಮಾನ್, ನಾಗರಿಕ ವೇದಿಕೆ ಸಂಚಾಲಕಿ ಶಾರದಾ ಹುಲಿನಾಯಕ, ಜಮಾತೆ ಇಸ್ಲಾಮಿ ಹಿಂದ್ನ ಮುಖಂಡ ಸಮದ್ ಪಾಷಾ ಪಾಲ್ಗೊಳ್ಳವರು ಎಂದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ನಾಗರಿಕ ವೇದಿಕೆ ಸಂಚಾಲಕಿ ಶಾರದಾ ಹುಲಿನಾಯಕ, ಬಸವ ಕೇಂದ್ರದ ಗೌರವಾಧ್ಯಕ್ಷ ಹರವಿ ನಾಗನಗೌಡ, ಬಿ.ಬಸವರಾಜ, ಜಾನ್ವೆಸ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-32-682496564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.