ರಾಯಚೂರು: ಇಲ್ಲಿನ ಜವಾಹರನಗರದ ಸಮೀಪ ಕರ್ನಾಟಕ ಸಂಘದ ಬಳಿ ಮನೆಯಲ್ಲಿ ಗುರುವಾರ ಚಿನ್ನಾಭರಣ ಕಳ್ಳತನ ನಡೆದಿದೆ.

ನರಸಿಂಹಮೂರ್ತಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರು ಮನೆಯಲ್ಲಿ ಇರದಿದ್ದಾಗ ಅಲಮಾರಿಯಲ್ಲಿದ್ದ 21 ತೊಲ ಚಿನ್ನಾಭರಣ ಸೇರಿ ₹ 2 ಕೋಟಿ ಮೌಲ್ಯದ ಅಭರಣ ಕಳ್ಳತನವಾಗಿದೆ ಎನ್ನಲಾಗಿದ್ದು, ಖಚಿತ ಮಾಹಿತಿ ಸಿಕ್ಕಿಲ್ಲ. ಬೆಂಗಳೂರಿನಿಂದ ಗುರುವಾರ ಮುಂಜಾನೆ ಮನೆಗೆ ಬಂದಾಗ ಮನೆಯಲ್ಲಿ ಅಲಮಾರಿ ಚೆಲ್ಲಾಪಿಲ್ಲಿಯಾಗಿರುವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಶ್ವಾನ ದಳ, ಬೆರಳಚ್ಚು ತಜ್ಞರ ತಂಡದೊಂದಿಗೆ ತನಿಖೆ ಪ್ರಾರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಹಿಂಬಾಗಿಲು ಮುರಿದು ಕಳ್ಳತನ ನಡೆದಿದೆ. ಎಷ್ಟು ಮೌಲ್ಯದ ಕಳ್ಳತನವಾಗಿದೆ ಎಂದು ನಿಖರವಾಗಿ ಗೊತ್ತಾಗಿಲ್ಲ ಎಂದು ಎಸ್ಪಿ ಅರುಣಾಂಗ್ಷುಗಿರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-540235732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.