ರಾಯಚೂರು: ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಋತುವಿನಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಂದ ಬಿಳಿಜೋಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ.

ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಲಾದ ಅನುಕ್ರಮವಾರು ರೈತರಿಂದ ಖರೀದಿ ಮಾಡಲಾಗುವುದು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ನಜೀರ್ ಅಹ್ಮದ್ ತಿಳಿಸಿದ್ದಾರೆ.

ರೈತರು ಈಗಾಗಲೇ ತಮ್ಮ ಎಫ್ಐಡಿಯೊಂದಿಗೆ ನೋಂದಣಿ ಮಾಡಿಕೊಂಡಿದ್ದು, ಮೇ 11ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ರೈತರು ಆತುರಪಡದೆ ಅಥವಾ ನೂಕು ನುಗ್ಗಲು ಮಾಡದೆ, ತಮಗೆ ಖರೀದಿ ಕೇಂದ್ರದಿಂದ ನೀಡಲಾಗುವ ದಿನಾಂಕವಾರು ಜೋಳ ಸರಬರಾಜು ಮಾಡಬೇಕು. ಖರೀದಿ ಕೇಂದ್ರಕ್ಕೆ ಬರುವ ಮುಂಚಿತವಾಗಿಯೇ ದಾಸ್ತಾನು ಗುಣಮಟ್ಟ, ತೇವಾಂಶ ಹಾಗೂ ಸ್ವಚ್ಛತೆಯ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ನೋಂದಣಿಯಾಗಿರುವ ಸರ್ವೆ ಸಂಖ್ಯೆ ಹಾಗೂ ಎಫ್ಐಡಿಗಳನ್ನು ಬೆಳೆ ದರ್ಶಕ ಆ್ಯಪ್ ಮುಖಾಂತರ ನೈಜತೆ ಪರಿಶೀಲಿಸಲಾಗುವುದು. ಸಂಶಯಾತ್ಮಕ ಹಾಗೂ ಬಿಳಿ ಜೋಳವನ್ನು ಬೆಳೆಯದೇ ಇರುವ ಸರ್ವೆ ಸಂಖ್ಯವಾರು ಎಫ್ಐಡಿಗಳನ್ನು ಬ್ಲಾಕ್ ಮಾಡಲು ಕ್ರಮವಹಿಸಲಾಗಿದೆ. ಇದಕ್ಕೆ ಆಕ್ಷೇಪಣೆ ಇದ್ದರೆ ಸರ್ಮಥನೀಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಬಿಳಿ ಜೋಳ ಬೆಳೆಯದೇ ನೋಂದಣಿ ಮಾಡಿಕೊಂಡು ಖರೀದಿ ಕೇಂದ್ರಗಳಿಗೆ ಜೋಳವನ್ನು ಸರಬರಾಜು ಮಾಡಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-1549411292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.