ರಾಯಚೂರು: ‘ಮುಂಗಾರು ಹಂಗಾಮಿನಲ್ಲಿ ಖರೀದಿಸಿದ ಜೋಳದ ಬಾಕಿ ಹಣ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲೆಯ ರೈತರನ್ನು ಸಂಘಟಿಸಿ, ಹೋರಾಟ ನಡೆಸಲಾಗುವುದು’ ಎಂದು ರೈತ ಮುಖಂಡ ಅಮೀನ್ ಪಾಷಾ ದಿದ್ದಿಗಿ ಎಚ್ಚರಿಕೆ ನೀಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂಗಾರು ಹಂಗಾಮಿನಲ್ಲಿ ರೈತರಿಂದ 8 ಲಕ್ಷ 20 ಸಾವಿರ ಕ್ವಿಂಟಲ್ ಜೋಳ ಖರೀದಿಸಿದೆ. ಇದುವರೆಗೆ ಕೇವಲ 80 ಸಾವಿರ ಕ್ವಿಂಟಲ್ ಜೋಳದ ₹38.55 ಕೋಟಿ ಮಾತ್ರ ರೈತರಿಗೆ ಪಾವತಿಸಿದೆ. ಇನ್ನೂ ₹303 ಕೋಟಿ 31 ಲಕ್ಷ 80 ಸಾವಿರ ರೈತರಿಗೆ ನೀಡಬೇಕು. ಜೋಳ ಕಟಾವು ಮಾಡಿ ಆರು ತಿಂಗಳು ಕಳೆದರೂ ಸಂಪೂರ್ಣ ಹಣ ಬಿಡುಗಡೆಯಾಗಿಲ್ಲ’ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಮುಕ್ತ ಮಾರುಕಟ್ಟೆಯಲ್ಲಿ ಜೋಳಕ್ಕೆ ಸಮರ್ಪಕ ಬೆಲೆ ದೊರೆಯದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಹಿಂಗಾರು ಜೋಳ ಖರೀದಿ ಪ್ರಕ್ರಿಯೆಯೂ ಆರಂಭವಾಗಿದ್ದು, ರೈತರು ತಂದಿರುವ ಹೊಸ ಜೋಳ ನುಸಿಯಾಗುತ್ತಿರುವುದರಿಂದ ಮತ್ತಷ್ಟು ಆತಂಕ ಎದುರಾಗಿದೆ’ ಎಂದು ತಿಳಿಸಿದರು.

‘ಈ ಸಮಸ್ಯೆ ನೂತನ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ವಿಳಂಬ ಮಾಡದೇ ತಕ್ಷಣ ಮುಂಗಾರು ಜೋಳದ ಬಾಕಿ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು’ ಎಂದರು.

ನಿಂಗಪ್ಪ, ಬಡೇಸಾಬ್, ಬಸವರಾಜ, ಪ್ರಹ್ಲಾದರೆಡ್ಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-360454133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.