ಕವಿತಾಳ: ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಶಿವಪ್ಪ ತಾತನ ಮಠದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರ ಸಂಘದ ವತಿಯಿಂದ ನಿರ್ಮಿಸಿದ ಬಿದಿರಿನ ಟೆಂಟ್ ಮತ್ತು ಅರವಟಿಗೆ ಪ್ರಯಾಣಿಕರಿಗೆ ಆಸರೆಯಾಗಿವೆ.

ಬೇಸಿಗೆ ರಣ ಬಿಸಿಲಿನಲ್ಲಿ ಬಸ್ಗಳಿಗೆ ಕಾಯ್ದು ನಿಲ್ಲುವ ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಇದೀಗ ಈ ಟೆಂಟ್ನಲ್ಲಿ ಕುಳಿತುಕೊಂಡು ಬಿಸಿಲಿನಿಂದ ರಕ್ಷಣೆ ಪಡೆಯುತ್ತಿದ್ದಾರೆ. ಟೆಂಟ್ ಪಕ್ಕದಲ್ಲಿ ಸಹಕಾರ ಸಂಘ ಮತ್ತು ಮಾನ್ವಿಯ ಗುತ್ತಿಗೆದಾರ ಎಂ.ಈರಣ್ಣ ಅವರು ಪ್ರತ್ಯೇಕವಾಗಿ ಎರಡು ತಂಪಾದ ಶುದ್ಧ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಿದ್ದು ಪ್ರಯಾಣಿಕರಿಗೆ ಕುಡಿಯುವ ನೀರಿನ ಅನುಕೂಲವನ್ನು ಕಲ್ಪಿಸಲಾಗಿದೆ.

ಹೊಸ ಬಸ್ ನಿಲ್ದಾಣ ಹೊರ ವಲಯದಲ್ಲಿರುವ ಕಾರಣ ಬಹುತೇಕ ಪ್ರಯಾಣಿಕರು ಇಲ್ಲಿನ ಹಳೆ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯ್ದು ನಿಲ್ಲುವುದು ಸಾಮಾನ್ಯ. ಇತ್ತೀಚೆಗೆ ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಮಠದ ಆವರಣದ ಚಾವಣಿ ತೆರವುಗೊಳಿಸಿದ ಪರಿಣಾಮ ಪ್ರಯಾಣಿಕರಿಗೆ ಸಮಸ್ಯೆಯಾಗಿತ್ತು. ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಅರವಟಿಗೆ ಸ್ಥಾಪಿಸುತ್ತಿದ್ದ ಸಹಕಾರ ಸಂಘವು ಈ ವರ್ಷ ಸಾರ್ವಜನಿಕರ ಅನುಕೂಲಕ್ಕಾಗಿ ತಾತ್ಕಾಲಿಕ ಟೆಂಟ್ ನಿರ್ಮಿಸಿದೆ.

‘ಇಲ್ಲಿನ ಹಳೆ ಬಸ್ ನಿಲ್ದಾಣದಲ್ಲಿದ್ದ ತಂಗುದಾಣ ತೆರವುಗೊಳಿಸಿ ದಶಕಗಳು ಕಳೆದಿವೆ. ಅದೇ ರೀತಿ ರಸ್ತೆ ನಿರ್ಮಾಣ ಸಂದರ್ಭದಲ್ಲಿ ತೆರವುಗೊಳಿಸಿದ ಶೌಚಾಲಯ ಮರು ನಿರ್ಮಾಣ ಮಾಡದ ಕಾರಣ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ನಿತ್ಯ ವಿವಿಧ ಕೆಲಸ ಕಾರ್ಯಗಳಿಗೆ ಬೇರೆ ಬೇರೆ ಊರುಗಳಿಂದ ಆಗಮಿಸುವ ಹಳ್ಳಿ ಜನರು ಅದರಲ್ಲೂ ಮಹಿಳೆಯರು ಶೌಚಾಲಯಕ್ಕೆ ಪರದಾಡುವ ಪರಿಸ್ಥಿತಿ ಇದೆ. ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರಿಗೆ ನೆರಳು ಒದಗಿಸುವುದು ಮತ್ತು ಶೌಚಾಲಯ ವ್ಯವಸ್ಥೆ ಬಗ್ಗೆ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕ ಸಂಘಟನೆ ಮುಖಂಡ ಎಂ.ಡಿ.ಮೆಹಬೂಬ್ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-32-695692619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.