ಕವಿತಾಳ: ಸಮೀಪದ ಇರಕಲ್ ಗ್ರಾಮದಲ್ಲಿ ಮಳೆ–ಗಾಳಿಗೆ ಪರಿವರ್ತಕ ಸುಟ್ಟಿದ್ದು, ವಿದ್ಯುತ್ ಪೂರೈಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ಆರು ದಿನಗಳಿಂದ ಗ್ರಾಮದಲ್ಲಿ ಕತ್ತಲು ಆವರಿಸಿದೆ. ಸ್ಥಳೀಯರು ಸಮಸ್ಯೆ ಎದುರಿಸುವಂತಾಗಿದೆ.

ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗ್ರಾಮದಲ್ಲಿನ ಪರಿವರ್ತಕ ಸುಟ್ಟಿದೆ. ಮನೆಯಲ್ಲಿನ ಟಿವಿ, ಚಾರ್ಜಿಗೆ ಹಾಕಿದ್ದ ಮೊಬೈಲ್ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿವೆ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಿ ವಾರ ಸಮೀಪಿಸುತ್ತಿದ್ದರೂ ಜೆಸ್ಕಾಂ ಅಧಿಕಾರಿಗಳು ಪರಿವರ್ತಕ ದುರಸ್ತಿಗೆ ಕಾಳಜಿ ವಹಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೆರೆ ನೀರು ಪೂರೈಕೆಗೆ ಪ್ರತ್ಯೇಕ ಲೈನ್ ವ್ಯವಸ್ಥೆ ಹೊಂದಿದ ಹಿನ್ನೆಲೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿಲ್ಲ. ವಿದ್ಯುತ್ ಪೂರೈಕೆ ಸ್ಥಗಿತವಾದ ಪರಿಣಾಮ ಹಿಟ್ಟಿನ ಗಿರಣಿ ಗಳು ಬಂದ್ ಆಗಿವೆ. ಮನೆಯಲ್ಲಿ ಟಿವಿ ಬಂದ್ ಆಗಿವೆ. ಮೊಬೈಲ್ ಚಾರ್ಜ್ಗೂ ಸಮಸ್ಯೆ ಉಂಟಾಗಿದೆ. ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ಸೋಮವಾರ ಪರಿವರ್ತಕವನ್ನು ದುರಸ್ತಿಗೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ಗ್ರಾಮದ ಶ್ರೀನಿವಾಸ ಅವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-2080842702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.