ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಇಲ್ಲಿನ ಕೃಷಿ ವಿಶ್ವವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಕೃಷಿ ಮೇಳಕ್ಕೆ ರೈತರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ.

ಕೃಷಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು.

ಕೃಷಿ ಮೇಳದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಸೇರಿದಂತೆ ರೈತರಿಗೆ ಸಂಬಂಧಿಸಿದ ಹಲವಾರು ಇಲಾಖೆಗಳು ಮಳಿಗೆಗಳನ್ನು ಸ್ಥಾಪಿಸಿ ರೈತರಿಗೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವ ಕಾರ್ಯ ಮಾಡಿದೆ.

ಜಲಾನಯನ ಅಭಿವೃದ್ಧಿ ಯೋಜನೆಯಡಿ ವಿವಿಧ ಬಗೆಯ ಮಣ್ಣುಗಳ ಮಾದರಿ ಹಾಗೂ ಮಣ್ಣುಗಳಿಗೆ ಪೂರಕವಾಗಿರುವ ಬೆಳೆ ಪದ್ಧತಿಯನ್ನು ರೈತರಿಗೆ ಪರಿಚಯಿಸುವ ಕಾರ್ಯ ನಡೆದಿದೆ. ಮಣ್ಣು ಮತ್ತು ನೀರು ಸಂರಕ್ಷಣೆ ವಿಭಾಗದ ವತಿಯಿಂದ ಸವಳು, ಜವಳು ಮಣ್ಣನ್ನು ಫಲವತ್ತುಗೊಳಿಸುವುದು, ನೀರನ್ನು ವ್ಯರ್ಥವಾಗಿ ಹರಿಯಬಿಡದೆ, ಸಮರ್ಪಕವಾಗಿ ಬಳಸುವ ಕಾರ್ಯಕ್ಕೆ ಒತ್ತು

ನೀಡುವಂತಹ ಮಾಹಿತಿಯನ್ನು ರೈತರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಭತ್ತ, ಹತ್ತಿ, ಬೇಳೆಕಾಳು, ಎಣ್ಣೆ ಕಾಳುಗಳು, ಸಿರಿಧಾನ್ಯಗಳ ವಿವಿಧ ಬಗೆಯ ತಳಿಗಳ ಪರಿಚಯವನ್ನು ಕೃಷಿ ಮೇಳದಲ್ಲಿ ಮಾಡಿಕೊಡಲಾಗಿದೆ.

ಸೂರ್ಯಕಾಂತಿ ಬೆಳೆಯನ್ನು ಲಾಭದಾಯಕಗೊಳಿಸಲು ಬೇಕಾದ ಕೃಷಿ ಪದ್ಧತಿಯನ್ನು ರೈತರಿಗೆ ಪರಿಚಯಿಸಲಾಗುತ್ತಿದೆ. ನೈಸರ್ಗಿಕ ವಿಪತ್ತು ಮತ್ತು ಕೃಷಿ ಹವಾಮಾನ ವಿಭಾಗದಿಂದ ರೈತರು ವಿವಿಧ ಬಗೆ ಪರಿಸ್ಥಿತಿಗಳಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳನ್ನು ತಿಳಿಸಿಕೊಡುವ

ಕಾರ್ಯ ಕೃಷಿ ಮೇಳದಲ್ಲಿ ಮಾಡಿದೆ. ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವು ಕೂಡ ಕೃಷಿಗೆ ಸಂಬಂಧಿಸಿದಂತೆ ಹೆಚ್ಚು ಹೆಚ್ಚು ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಕೃಷಿ ಮೇಳದಲ್ಲಿ ಮಾಡಲಾಗಿದೆ.

ವಿವಿಧ ಬಗೆಯ ಬಿತ್ತನೆ ಬೀಜಗಳ ತಳಿಗಳು, ಕೀಟನಾಶಕಗಳು, ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಮೇಳದಲ್ಲಿ ರೈತರಿಗೆ ಪರಿಚಯಿಸುವ ಕಾರ್ಯ ನಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರ ಅಧ್ಯಕ್ಷ ಪಾಮಯ್ಯ ಮುರಾರಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿ.ಪಂ. ಸಿಇಒ ಈಶ್ವರಕುಮಾರ ಕಾಂದು, ಎಸ್ಪಿ ಅರುಣಾಂಗ್ಷು ಗಿರಿ, ಕೃಷಿ ವಿವಿ ಕುಲಪತಿ ಡಾ. ಎಂ. ಹನುಮಂತಪ್ಪ, ಮಹಾನಗರಪಾಲಿಕೆ ಆಯುಕ್ತ ಜುಬಿನ್, ಮೊಹಾಪಾತ್ರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಶೀರ್ ಅಹ್ಮದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.