ರಾಯಚೂರು: ಹೊರಗುತ್ತಿಗೆ ಕಾರ್ಮಿಕರ ಕೂಲಿ ಹಣ ಲಪಟಾಯಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಹಾಗೂ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಿ ಮತ್ತು ಡಿ ಗ್ರೂಪ್ ಹೊರ ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ.

2025ರ ಡಿಸೆಂಬರ್ನಿಂದ ಈವರೆಗಿನ ಕೂಲಿಯನ್ನು ಪಾವತಿಸದೆ, 228 ಸಿ ಮತ್ತು ಡಿ ಗ್ರೂಪ್ ನೌಕರರನ್ನು ಗುಲಾಮರಂತೆ ಸರ್ಕಾರಿ ಆಸ್ಪತ್ರೆಯಲ್ಲಿ ದುಡಿಸಲಾಗುತ್ತಿದೆ. ಗಟ್ಟಿಯಾಗಿ ಕೂಲಿ ಕೇಳಿದ ಕಾರ್ಮಿಕರು ಕೆಲಸ ಕಳೆದುಕೊಳ್ಳುವಂತಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 228 ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಕಳೆದ 9 ತಿಂಗಳುಗಳಿಂದ ಕೂಲಿ ನೀಡಿಲ್ಲ. ದಿನದ 24 ಗಂಟೆ ಕಾರ್ಯನಿರ್ವಹಿಸುವ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮತ್ತಿತರ ಆಸ್ಪತ್ರೆಗಳಲ್ಲಿ ವರ್ಷ ಪೂರ್ತಿ ಕೆಲಸಕ್ಕೆ ಎಂದು ನೇಮಿಸಿಕೊಳ್ಳಲಾಗಿದೆ. ಆದರೆ, 2025ರ ಸೆಪ್ಟೆಂಬರ್ನಿಂದ ಡಿಸೆಂಬರ್ವರೆಗೆ ಕೆಲಸದಿಂದ ಇವರನ್ನು ರಿಲೀವ್ ಎಂಬ ನಾಟಕವಾಡಿ ಇವರ ಪಾಲಿನ 4 ತಿಂಗಳ ವೇತನವನ್ನು ಕದಿಯಲಾಗಿದೆ ಎಂದು ಆರೋಪಿಸಿದರು.

2025ರಲ್ಲಿ ಗುತ್ತಿಗೆ ಹಿಡಿದ ಮೈಸೂರಿನ ಮೆ.ಶಾರ್ಪ್ ವಾಚ್ ಇನ್ವೆಸ್ಟಿಗೇಷನ್ ಸೆಕ್ಯೂರಿಟಿ ಸರ್ವಿಸಸ್ ಹಾಗೂ 2026ರಲ್ಲಿ ಗುತ್ತಿಗೆ ಪಡೆದಿರುವ ಬಳ್ಳಾರಿಯ ಪಾಪುಲರ್ ಎಂಜಿನಿಯರಿಂಗ್ ಸರ್ವಿಸಸ್ ಆಳುವ ವರ್ಗದ ಅವಳಿ ಪಕ್ಷದ ಪುಡಾರಿಗಳ ಒಡೆತನದಲ್ಲಿವೆ. ಹೊರಗುತ್ತಿಗೆ ಸಂಸ್ಥೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೇರಿಕೊಂಡು ಜಿಲ್ಲೆಯಲ್ಲಿ 3 ಕೂಲಿ ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪ ಮಾಡಿದರು.

ಜಿ.ಪಂ ಸಿಇಒ ಹಾಗೂ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಕ್ರಮ ಕೈಗೊಂಡು, ವೇತನ ಪಾವತಿ ಮಾಡಬೇಕು. ಇಲ್ಲದಿದ್ದರೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದರು.

ಸಂಘದ ರಾಜ್ಯ ಕಾರ್ಯದರ್ಶಿ ಎಂ.ಗಂಗಾಧರ, ಅಧ್ಯಕ್ಷ ಶಂಕ್ರಪ್ಪ ಗುಂಡಸಾಗರ, ಉಪಾಧ್ಯಕ್ಷ ಆಂಜನೇಯ ಅರಕೇರ, ಕಾರ್ಯದರ್ಶಿ ಅಮರೇಶ ಬಡಿಗೇರ, ಜಗದೀಶ ತುಪ್ಪದ, ಯಲ್ಲಪ್ಪ, ನಾಗಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-32-352966718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.