ಭಾನುವಾರ, ಜೂಲೈ 12, 2020
23 °C

ರಾಯಚೂರು: ಹನಿ ನೀರಾವರಿ ಕಾಮಗಾರಿಗೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬುದ್ದನ್ನಿ ಗ್ರಾಮದಲ್ಲಿ ಕೃಷ್ಣಾ ಜಲಭಾಗ್ಯ ನಿಗಮ ನಿಯಮಿತದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಈ ಯೋಜನೆಗೆ 3.75 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ₹612 ಕೋಟಿ ವೆಚ್ಚದ ಕಾಮಗಾರಿ ಇದಾಗಿದ್ದು, ಹೈದರಾಬಾದ್ ಮೇಘಾ ಎಂಜಿನಿಯರಿಂಗ್ ಆಂಡ್ ಇನ್ ಫ್ರಾಸ್ಟ್ರಕ್ಚರ್ ಕಂಪೆನಿಗೆ ಗುತ್ತಿಗೆ ವಹಿಸಲಾಗಿದೆ.

7 ಕಿಮೀ ಉದ್ದಕ್ಕೂ ಒಟ್ಟು 12,700 ಹೆಕ್ಟೇರ್ ಭೂಮಿಯು ಹನಿನೀರಾವರಿಗೆ ಒಳಪಡಲಿದೆ. ಯೋಜನೆಯಡಿ 20 ಗ್ರಾಮಗಳು ಒಳಪಟ್ಟಿವೆ. 8,734 ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು