ಲಿಂಗಸುಗೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ನಡುಗಡ್ಡೆ ಗ್ರಾಮ ಹಂಚಿನಾಳದಲ್ಲಿ ಸೋಮವಾರ ಸಿಡಿಲು ಬಡಿದು ಕುರಿಗಾರರೊಬ್ಬರು ಮೃತಪಟ್ಟಿದ್ದಾರೆ.
ಕುರಿಕಾಯಲು ತೆರಳಿದ್ದ ದುರುಗಪ್ಪ ಹನುಮಪ್ಪ ಕರಡಕಲ್ಲ (38) ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.