ಲಿಂಗಸುಗೂರು: ‘ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ಮಾಡದೇ ತ್ವರಿತವಾಗಿ ಸ್ಪಂದಿಸಿ, ಪರಿಹಾರ ಒದಗಿಸಬೇಕು’ ಎಂದು ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚಿಸಿದರು.

ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಜಾಪುರ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಅವರು,‘ಸರ್ಜಾಪುರ ಹಾಗೂ ಕುಪ್ಪಿಗುಡ್ಡ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ನೀರುಗಂಟಿಯಿಂದಲೇ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ’ ಎಂದರು.

‘ಹೊಸದಾಗಿ ನೀರುಗಂಟಿ ನೇಮಕ ಮಾಡಿಕೊಳ್ಳಿ. ಕೆರೆಯಲ್ಲಿ ನೀರಿದ್ದರೂ ಸರ್ಜಾಪುರ ಗ್ರಾಮದ ಆಂಜನೇಯ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ನನ್ನ ಗಮನಕ್ಕೆ ಬಂದಿದೆ. ಕೂಡಲೇ ಅಲ್ಲಿ ಹೊಸ ಕೊಳವೆಬಾವಿ ಕೊರೆಯಿಸಿ. ನೀರಿನ ಸಮಸ್ಯೆ ಬಗ್ಗೆ ತಾತ್ಸಾರ ಮನೋಭಾವದಿಂದ ನೋಡದೆ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿ’ ಎಂದು ತಾ.ಪಂ ಇಒ ಉಮೇಶ, ಪಿಡಿಒ ಬಸವರಾಜ ಅವರಿಗೆ ಸೂಚಿಸಿದರು.

‘ಈ ಹಿಂದೆ ಇದ್ದ ಪಿಡಿಒ ಅವರನ್ನು ಬೇರೆಡೆ ವರ್ಗಾವಣೆ ಮಾಡಿದ್ದರಿಂದ ಪಿಡಿಒ ಬಸವರಾಜ ಅವರನ್ನು ಸರ್ಜಾಪುರ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ. ಆದರೆ, ಹಿಂದಿನ ಪಿಡಿಒ ಅವರು ಹೊಸ ಪಿಡಿಒಗೆ ಅಧಿಕಾರ ಹಸ್ತಾಂತರ ಮಾಡದ ಕಾರಣ ಗ್ರಾಮ ಪಂಚಾಯಿತಿ ಆಡಳಿತ ನಿರ್ವಹಣೆಯಲ್ಲಿ ತೊಂದರೆಯಾಗುತ್ತಿದೆ’ ಎಂದು ಜಿ.ಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ ಶಾಸಕರ ಗಮನಕ್ಕೆ ತಂದರು.

‘ಹೊಸ ಪಿಡಿಒಗೆ ಅಧಿಕಾರ ಹಸ್ತಾಂತರ ಮಾಡುವಂತೆ ಹಿಂದಿನ ಪಿಡಿಒಗೆ ನೋಟಿಸ್ ನೀಡಿ’ ಎಂದು ತಾ.ಪಂ ಇಒಗೆ ಸೂಚನೆ ನೀಡಿದರು.

ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಯದ್ದಲದಿನ್ನಿ, ಶಂಕರಗೌಡ, ಹನುಮಂತ ನೆಲೋಗಿ, ಶಿವಪುತ್ರ ಕುಪ್ಪಿಗುಡ್ಡ, ಭಗೀರಥ, ನಿಜಗುಣಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-1583371671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.