ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಸತ್ಯಮ್ಮ ಅವರಿಗೆ ಮನವಿ ಸಲ್ಲಿಸಿದರು.

ಹುಲಿಗುಡ್ಡದಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನ ಭೂಮಿ ಇಲ್ಲ. ಕಸಬಾಲಿಂಗಸುಗೂರಿನ ಸರ್ವೆ ನಂ–492ರಲ್ಲಿ ಒಟ್ಟು 47.38 ಎಕರೆ ಸರ್ಕಾರಿ ಭೂಮಿ ಇದೆ. ಅದರಲ್ಲಿ 4 ಎಕರೆಯನ್ನು ಸ್ಮಶಾನಕ್ಕೆ ಒದಗಿಸಬೇಕು. ಇದೇ ಭೂಮಿಯಲ್ಲಿ ಅಂತ್ಯಕ್ರಿಯೆ ಮಾಡುವಂತೆ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದರಿಂದ ಹಿಂದಿನಿಂದಲೂ ಅಲ್ಲಿಯೇ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ, ರುದ್ರಭೂಮಿಗೆ ಪ್ರತ್ಯೇಕ ಪಹಣಿ ಹಾಗೂ ಹದ್ದುಬಸ್ತು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ರವಿಕುಮಾರ ಭೋವಿ, ಗಣೇಶ, ವಿಜಯಕುಮಾರ, ರಾಚಪ್ಪ ಆಲ್ವಿ, ನಾಗಪ್ಪ, ಬಸವರಾಜ ಭಜಂತ್ರಿ, ಚಂದ್ರು ಬಡಿಗೇರ, ವಿರೇಶ ಬಡಿಗೇರ, ಅಮರೇಶ ನಾಯಕ, ಶಿವಮ್ಮ ಹಾಗೂ ದೇವಮ್ಮ ಸೇರಿದಂತೆ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-32-1972986166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.