ರಾಯಚೂರು: ‘ರಾಜ್ಯ ಸರ್ಕಾರ ಏ. 24ರಂದು ನಡೆಸಿದ ಸಚಿವ ಸಂಪುಟದ ತೀರ್ಮಾನ ಮಾದಿಗ ಹಾಗೂ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಒಳಮೀಸಲಾತಿಯಲ್ಲಿ ಮರಣ ಶಾಸನ ಬರೆಯಲಾಗಿದೆ’ ಎಂದು ಮಾದಿಗ ದಂಡೋರ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಿ. ನರಸಪ್ಪ ದಂಡೋರ ಆರೋಪಿಸಿದರು.

‘ಚುನಾವಣೆ ಪ್ರಣಾಳಿಕೆಯಲ್ಲಿ ನುಡಿದಂತೆ ನಡೆಯುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಉದ್ದೇಶಪೂರ್ವಕ ಮಾದಿಗ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು. ‘ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಮೂರು ವರದಿಗಳನ್ನು ಕಸದ ಬುಟ್ಟಿಗೆ ಎಸೆದು ತಮ್ಮ ಸ್ವಾರ್ಥಕ್ಕಾಗಿ ಮಾದಿಗ ಸಮಾಜವನ್ನು ಬಲಿ ಕೊಟ್ಟಿದೆ. ಅದಲ್ಲದೆ ಒಸಮೀಸಲಾತಿಯಲ್ಲಿನ 101 ಜಾತಿ ಜನಾಂಗಕ್ಕೆ ಕಣ್ಣಿಗೆ ಮಣ್ಣು ಎರೆಚುವ ಕೆಲಸ ಕಾಂಗ್ರೆಸ್ ಮಾಡಿದೆ’ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ದುಳ್ಳಯ್ಯ ಗುಂಜಹಳ್ಳಿ, ಜಕ್ರಪ್ಪ ಹಂಚಿನಾಳ, ಹನುಮಂತು ಜುಲಮುಗೇರಾ, ಭೀಮೇಶ ತುಂಟಾಪೂರು, ಅನಿಲ ಕುಮಾರ, ಯಲ್ಲಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-1022651495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.